AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru:  ಡಾ ಕೆ ಸುಧಾಕರ್ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ

ಬೊಮ್ಮಾಯಿ ಸರ್ಕಾರದಲ್ಲಿ ಹೆವಿವೇಟ್ ಅನಿಸಿಕೊಂಡಿದ್ದ ಸುಧಾಕರ್ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 16, 2023 | 1:40 PM

Share

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಪರಚಿತನಾಗಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ (Pradeep Eshwar) ಅವರಿಂದ ಸುಮಾರು 10,000 ಕ್ಕಿಂತ ಅಧಿಕ ಮತಗಳಿಂದ ಸೋತ ಮಾಜಿ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರ ಮನೆಗೆ ಇಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭೇಟಿ ನೀಡಿದರು. ಬೊಮ್ಮಾಯಿ ಸರ್ಕಾರದಲ್ಲಿ ಹೆವಿವೇಟ್ ಅನಿಸಿಕೊಂಡಿದ್ದ ಮತ್ತು ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಅವರ ಬೆಂಗಳೂರು ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಬೊಮ್ಮಾಯಿ, ‘ಸುಧಾಕರ್ ಅವರಲ್ಲಿ ಧೈರ್ಯ ತುಂಬಲು ಬಂದಿದ್ದೆ, ಸೋಮಣ್ಣ ಅವರ ಮನೆಗೂ ಹೋಗುತ್ತಿರುವೆ, ಇವರೆಲ್ಲ ನಮ್ಮ ಜೊತೆ ಶ್ರಮವಹಿಸಿ ಕೆಲಸ ಮಾಡಿದ್ದರು’ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ