ಚನ್ನಪಟ್ಟಣದ ದೇವರಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ

Edited By:

Updated on: Jun 29, 2026 | 12:39 PM

ನಾಡಪ್ರಭು ಕೆಂಪೇಗೌಡರ ಜಯಂತಿಯ ಆಚರಣೆಯ ನಂತರ ಚನ್ನಪಟ್ಟಣದ ದೇವರಹಳ್ಳಿ ಗ್ರಾಮದಲ್ಲಿ ಅವರ ಬ್ಯಾನರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಈ ಘಟನೆ ಜೂನ್ 27ರ ತಡರಾತ್ರಿ ನಡೆದಿದೆ. ಈ ಕೃತ್ಯದಿಂದ ಗ್ರಾಮಸ್ಥರು ತೀವ್ರ ಆಕ್ರೋಶಗೊಂಡಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.

ರಾಮನಗರ, ಜೂನ್ 29: ನಾಡಪ್ರಭು ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿದ ಚನ್ನಪಟ್ಟಣ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ರಾಜ್ಯಾದ್ಯಂತ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ, ಸಂಭ್ರಮದಿಂದ ಆಚರಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಜೂನ್ 27ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗಿತ್ತು. ಈ ಜಯಂತಿ ಆಚರಣೆಯ ಭಾಗವಾಗಿ ಗ್ರಾಮದಲ್ಲಿ ಬ್ಯಾನರ್ ಅಳವಡಿಸಲಾಗಿತ್ತು. ಕಿಡಿಗೇಡಿಗಳ ಈ ಕೃತ್ಯದ ಪರಿಣಾಮವಾಗಿ ಕೆಂಪೇಗೌಡರ ಭಾವಚಿತ್ರವಿದ್ದ ಬ್ಯಾನರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟನೆಯನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯ ಎಸಗಿದವರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More