ಓವಲ್ ಇನ್ವಿನ್ಸಿಬಲ್ಸ್ ‘ಹ್ಯಾಟ್ರಿಕ್’ ಚಾಂಪಿಯನ್ಸ್
Oval Invincibles vs Trent Rockets, Final: ದಿ ಹಂಡ್ರೆಡ್ ಲೀಗ್‌ನಲ್ಲಿ ಸತತ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಓವಲ್ ಇನ್ವಿನ್ಸಿಬಲ್ಸ್ ಹೊಸ ಇತಿಹಾಸ ಬರೆದಿದೆ. ಇದಕ್ಕೂ ಮುನ್ನ 2023 ಮತ್ತು 2024 ರಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡ ಟ್ರೋಫಿ ಎತ್ತಿ ಹಿಡಿದಿದ್ದರು. ಇದೀಗ ಮೂರನೇ ಬಾರಿ ಚಾಂಪಿಯನ್ ಪಟ್ಟಕ್ಕೇರುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ದಿ ಹಂಡ್ರೆಡ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಟ್ರೆಂಟ್ ರಾಕೆಟ್ಸ್ ತಂಡಕ್ಕೆ ಸೋಲುಣಿಸಿ ಓವಲ್ ಇನ್ವಿನ್ಸಿಬಲ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಓವಲ್ ಇನ್ವಿನ್ಸಿಬಲ್ಸ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಓವಲ್ ಇನ್ವಿನ್ಸಿಬಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವಿಲ್ ಜ್ಯಾಕ್ಸ್ 41 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ 72 ರನ್ ಚಚ್ಚಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಓವಲ್ ಇನ್ವಿನ್ಸಿಬಲ್ಸ್ ತಂಡ 100 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು.
169 ರನ್ ಗಳ ಗುರಿ ಬೆನ್ನತ್ತಿದ ಟ್ರೆಂಟ್ ರಾಕೆಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ 38 ಎಸೆತಗಳಲ್ಲಿ 64 ರನ್ ಬಾರಿಸಿದರೂ ಉಳಿದ ಬ್ಯಾಟರ್ ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಪರಿಣಾಮ ಟ್ರೆಂಟ್ ರಾಕೆಟ್ಸ್ 100 ಎಸೆತಗಳಲ್ಲಿ 142 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಓವಲ್ ಇನ್ವಿನ್ಸಿಬಲ್ಸ್ ತಂಡವು 26 ರನ್ ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಹ್ಯಾಟ್ರಿಕ್ ಚಾಂಪಿಯನ್ಸ್:
ದಿ ಹಂಡ್ರೆಡ್ ಲೀಗ್‌ನಲ್ಲಿ ಸತತ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಓವಲ್ ಇನ್ವಿನ್ಸಿಬಲ್ಸ್ ಹೊಸ ಇತಿಹಾಸ ಬರೆದಿದೆ. ಇದಕ್ಕೂ ಮುನ್ನ 2023 ಮತ್ತು 2024 ರಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡ ಟ್ರೋಫಿ ಎತ್ತಿ ಹಿಡಿದಿದ್ದರು. ಇದೀಗ ಮೂರನೇ ಬಾರಿ ಚಾಂಪಿಯನ್ ಪಟ್ಟಕ್ಕೇರುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

