ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್; 10ಕ್ಕೂ ಹೆಚ್ಚು ಜನರಿಗೆ ಗಾಯ, ಹಲವರು ಸಾವನ್ನಪ್ಪಿರುವ ಶಂಕೆ

Updated on: Oct 14, 2025 | 5:33 PM

ಇಂದು ಮಧ್ಯಾಹ್ನ ಜೈಸಲ್ಮೇರ್ ನಿಂದ ಜೋಧ್ ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿತು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಸ್ ನಿಂದ ದಟ್ಟ ಹೊಗೆ ಬರುತ್ತಿರುವುದನ್ನು ನೋಡಬಹುದು. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿದನು. ಪ್ರಾಥಮಿಕ ವರದಿಗಳ ಪ್ರಕಾರ 10-12 ಪ್ರಯಾಣಿಕರು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಹಲವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಜೈಸಲ್ಮೇರ್, ಅಕ್ಟೋಬರ್ 14: ರಾಜಸ್ಥಾನದ ಜೈಸಲ್ಮೇರ್ ನ ಥೈಯತ್ ಪ್ರದೇಶದ ಮಿಲಿಟರಿ ಠಾಣೆ ಬಳಿ ಚಲಿಸುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ನಲ್ಲಿ ಇಂದು ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ (Fire Accident) 10ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಮಧ್ಯಾಹ್ನ ಜೈಸಲ್ಮೇರ್ ನಿಂದ ಜೋಧ್ ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿತು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಸ್ ನಿಂದ ದಟ್ಟ ಹೊಗೆ ಬರುತ್ತಿರುವುದನ್ನು ನೋಡಬಹುದು. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿದನು. ಪ್ರಾಥಮಿಕ ವರದಿಗಳ ಪ್ರಕಾರ 10-12 ಪ್ರಯಾಣಿಕರು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಹಲವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ