ತುಂಗಾ ಜಲಾಶಯದ 21 ಕ್ರಸ್ಟ್ ಗೇಟ್ ಓಪನ್, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಜಲಾವೃತ

| Updated By: ರಮೇಶ್ ಬಿ. ಜವಳಗೇರಾ

Updated on: Jul 23, 2023 | 5:21 PM

ತುಂಗಾ ಜಲಾಶಯದ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 21 ಗೇಟ್​​ಗಳ ಮೂಲಕ ನೀರು ಹೊರಕ್ಕೆ ಬಿಡಲಾಗಿದೆ.

ಶಿವಮೊಗ್ಗ, (ಜುಲೈ 23): ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯದ 21 ಗೇಟ್​​ಗಳ ಮೂಲಕ ಇಂದು (ಜುಲೈ 23)  ನೀರು ಬಿಡುಗಡೆ ಮಾಡಲಾಯ್ತು. ತುಂಗಾ ಡ್ಯಾಂನಿಂದ ಬರೋಬ್ಬರಿ 35,868 ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಜಲಾವೃತವಾಗಿದೆ.

Published on: Jul 23, 2023 05:15 PM