ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ ಎಂದ ಡಿಕೆ ಶಿವಕುಮಾರ್
ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು, 7 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5000 ಗುಂಡಿಗಳು ಮುಚ್ಚಲು ಬಾಕಿ ಇವೆ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಸರ್ಕಾರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 20: ಯಾರು ಕೂಡ ರಸ್ತೆ ಗುಂಡಿ ಮಾಡುವುದಿಲ್ಲ, ಬಯಸೋದೂ ಇಲ್ಲ. ಹೆಚ್ಚು ಮಳೆ ಹಾಗೂ ಟ್ರಾಫಿಕ್ನಿಂದಾಗಿ ರಸ್ತೆ ಗುಂಡಿ ಆಗುತ್ತದೆ. ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ, ಇನ್ನೂ ಐದು ಸಾವಿರ ರಸ್ತೆ ಗುಂಡಿಗಳು ಬಾಕಿ ಇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಸ್ತೆ ಗುಂಡಿಗಳನ್ನು ಮುಚ್ಚಲು ನಾನು, ಸಿಎಂ ಸೂಚಿಸಿದ್ದೇವೆ. ಬಿಜೆಪಿಯವರು ರಾಜಕೀಯ ಮಾಡುವುದಕ್ಕೆ ಇದ್ದಾರೆ. ರಾಜಕೀಯ ಮಾಡುವವರು ಮಾಡಲಿ, ನಾವು ಏನೂ ಹೇಳಲು ಆಗಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

