ನೆಹರು, ಗಾಂಧಿ, ಯಾದವ್ ನಮ್ಮ ನಾಯಕರಲ್ಲ: ಯುವ ಮುಸ್ಲಿಮರಿಗೆ ಅಸಾದುದ್ದೀನ್ ಓವೈಸಿ ಕರೆ

Updated on: Oct 19, 2026 | 7:13 AM

ಉತ್ತರ ಪ್ರದೇಶದ ರಾಮ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ಕುಟುಂಬ ರಾಜಕಾರಣದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾವು ಇನ್ಮುಂದೆ ಯಾವುದೇ ನೆಹರು, ಗಾಂಧಿ ಅಥವಾ ಯಾದವ್ ಅವರನ್ನು ನಮ್ಮ ನಾಯಕರನ್ನಾಗಿ ಮಾಡಿಕೊಳ್ಳುವುದಿಲ್ಲ. ನಮ್ಮ ಯುವಕ-ಯುವತಿಯರೇ ಮುಂಚೂಣಿಯಲ್ಲಿ ನಿಂತು ನಾಯಕತ್ವ ವಹಿಸಲಿದ್ದಾರೆ" ಎಂದು ಓವೈಸಿ ಘೋಷಿಸಿದರು. ಇತರ ಸಮುದಾಯಗಳಂತೆ ಮುಸ್ಲಿಂ ಯುವಜನತೆಯಲ್ಲೂ ಅಪಾರ ಪ್ರತಿಭೆ ಮತ್ತು ಸಾಮರ್ಥ್ಯವಿದೆ, ಆದರೆ ಸಾಂಪ್ರದಾಯಿಕ ರಾಜಕೀಯ ಪಕ್ಷಗಳು ಅವರಿಗೆ ಕೇವಲ ಮತಬ್ಯಾಂಕ್ ಆಗಿ ಕಂಡರೇ ಹೊರತು ಸೂಕ್ತ ವೇದಿಕೆ ಕಲ್ಪಿಸಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಲಕ್ನೋ, ಅಕ್ಟೋಬರ್ 19: ಉತ್ತರ ಪ್ರದೇಶದ ರಾಮ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ಕುಟುಂಬ ರಾಜಕಾರಣದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾವು ಇನ್ಮುಂದೆ ಯಾವುದೇ ನೆಹರು, ಗಾಂಧಿ ಅಥವಾ ಯಾದವ್ ಅವರನ್ನು ನಮ್ಮ ನಾಯಕರನ್ನಾಗಿ ಮಾಡಿಕೊಳ್ಳುವುದಿಲ್ಲ. ನಮ್ಮ ಯುವಕ-ಯುವತಿಯರೇ ಮುಂಚೂಣಿಯಲ್ಲಿ ನಿಂತು ನಾಯಕತ್ವ ವಹಿಸಲಿದ್ದಾರೆ” ಎಂದು ಓವೈಸಿ ಘೋಷಿಸಿದರು. ಇತರ ಸಮುದಾಯಗಳಂತೆ ಮುಸ್ಲಿಂ ಯುವಜನತೆಯಲ್ಲೂ ಅಪಾರ ಪ್ರತಿಭೆ ಮತ್ತು ಸಾಮರ್ಥ್ಯವಿದೆ, ಆದರೆ ಸಾಂಪ್ರದಾಯಿಕ ರಾಜಕೀಯ ಪಕ್ಷಗಳು ಅವರಿಗೆ ಕೇವಲ ಮತಬ್ಯಾಂಕ್ ಆಗಿ ಕಂಡರೇ ಹೊರತು ಸೂಕ್ತ ವೇದಿಕೆ ಕಲ್ಪಿಸಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮುಸ್ಲಿಂ ಯುವಜನತೆಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಎಐಎಂಐಎಂ ಬದ್ಧವಾಗಿದೆ ಎಂದು ತಿಳಿಸಿದ ಅವರು, ತಮ್ಮ ಸ್ವಂತ ಹಕ್ಕುಗಳಿಗಾಗಿ ಹೊಸ ನಾಯಕತ್ವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಉಪಚುನಾವಣೆ ಹಾಗೂ ಸ್ಥಳೀಯ ರಾಜಕೀಯ ಸಮೀಕರಣಗಳ ಹಿನ್ನೆಲೆಯಲ್ಲಿ ಓವೈಸಿ ಅವರ ಈ ಹೇಳಿಕೆ ಯುಪಿ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More