ತುಂಗಾ, ಭದ್ರಾ ನದಿಗಳ ಉಳಿವಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ ಪಾದಯಾತ್ರೆ ಆರಂಭ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 06, 2024 | 6:24 PM

ಶೃಂಗೇರಿಯಿಂದ ಕಿಷ್ಕಿಂದೆವರೆಗೆ ತುಂಗಾ ಮತ್ತು ಭದ್ರಾ ನದಿಗಳ ಉಳಿವಿಗಾಗಿ ಬೃಹತ್ ಪಾದಯಾತ್ರೆ ಆರಂಭವಾಗಿದೆ. ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಮತ್ತು ಪರಿಸರ ಟ್ರಸ್ಟ್‌ನ ಸಹಯೋಗದೊಂದಿಗೆ ನಡೆಯುತ್ತಿರುವ ಈ ಅಭಿಯಾನದಲ್ಲಿ ಸಾವಿರಾರು ಜನರು ಭಾಗವಹಿಸುತ್ತಿದ್ದಾರೆ. ನದಿಗಳ ಕಲುಷಿತಗೊಳ್ಳುವಿಕೆಯನ್ನು ತಡೆಯುವುದು ಮತ್ತು ಪರಿಸರ ಸಂರಕ್ಷಣೆ ಮುಖ್ಯ ಉದ್ದೇಶವಾಗಿದೆ.

ಚಿಕ್ಕಮಗಳೂರು, ನವೆಂಬರ್​ 06: ತುಂಗಾ, ಭದ್ರಾ ನದಿಗಳ (rivers) ಉಳಿವಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ ಪಾದಯಾತ್ರೆ ಆರಂಭಿಸಲಾಗಿದೆ. ಶೃಂಗೇರಿ ನರಸಿಂಹ ವನದ ಅದಿಷ್ಟಾನ ಮಂದಿರದ ಸಮೀಪ ದೀಪ ಪ್ರಜ್ವಲಿಸುವ ಮೂಲಕ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸ್ವಾಮೀಜಿ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹುಟ್ಟುವ ತುಂಗಾ ಭದ್ರಾ ನದಿ ಉಳಿವಿಗಾಗಿ ಬೃಹತ್ ಆಂದೋಲನ ಕೈಗೊಳ್ಳಲಾಗುತ್ತಿದೆ. ತುಂಗಾ ಹಾಗೂ ಭದ್ರಾ ನದಿಗಳು ಕಲುಷಿತವಾಗುತ್ತಿರುವುದನ್ನು ತಡೆಯುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ಮಾಡಲಾಗುತ್ತಿದೆ. ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ಪರ್ಯಾವರಣ ಟ್ರಸ್ಟ್ ಸಹಯೋಗದಲ್ಲಿ ನಡೆಯುತ್ತಿರುವ ನಿರ್ಮಲ ತುಂಗಭದ್ರಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಶೃಂಗೇರಿಯಿಂದ ಹರಿಹರದವರೆಗೆ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನರು ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.