AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದ ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಬರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ

ಬರದ ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಬರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Oct 06, 2026 | 4:30 PM

Share

ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಮೂಲದ ವ್ಯಾಪಾರಿಯೊಬ್ಬ ಭಾನುವಳ್ಳಿ ಗ್ರಾಮದ ರೈತರಿಂದ ಭತ್ತ ಖರೀದಿಸಿ 4.26 ಕೋಟಿ ರೂ. ನೀಡದೆ ವಂಚಿಸಿದ್ದಾನೆ ಎಂದು ಆರೋಪಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ವ್ಯಾಪಾರಿ ಕೋಟ್ಯಾಂತರ ರೂಪಾಯಿ ಆಸ್ತಿ ಹೊಂದಿದ್ದು, ಹಣ ವಸೂಲಿ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದ್ದಾರೆ.

ದಾವಣಗೆರೆ, ಅಕ್ಟೋಬರ್​​ 06: ಬರದ ಸಂಕಷ್ಟದಲ್ಲಿರುವ ಅನ್ನದಾತರಿಗೆ ಭತ್ತದ ವ್ಯಾಪಾರಿಯೋರ್ವ ಗಾಯದ ಮೇಲೆ ಬರೆ ಎಳೆದಿರುವ ಆರೋಪ ಕೇಳಿಬಂದಿದೆ. ಮಲೆಬೆನ್ನೂರು ಮೂಲದ ವ್ಯಾಪಾರಿ ರಮೇಶ್‌ ಎಂಬಾತ ಒಂದೇ ಗ್ರಾಮದ ರೈತರಿಗೆ 4 ಕೋಟಿ ಹಣ ಕೊಡದೆ ವಂಚನೆ ಮಾಡಿರುವುದಾಗಿ ದಾವಣಗೆರೆ ಡಿಸಿ ಕಚೇರಿ ಎದುರು ಹರಿಹರ ತಾಲೂಕಿನ ಭಾನುವಳ್ಳಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ರೈತರಿಂದ ಭತ್ತ ಖರೀದಿಸಿದ್ದ ವ್ಯಾಪಾರಿ ರಮೇಶ್, 4 ಕೋಟಿ 26 ಲಕ್ಷ ರೂ. ಹಣ ಕೊಡದೆ ಸತಾಯಿಸುತ್ತಿದ್ದಾನೆ. ಹತ್ತಾರು ಸಲ ಸುತ್ತಾಡಿದ್ರೂ ಹಣ ನೀಡುತ್ತಿಲ್ಲ ಎಂದು ರೈತರು ದೂರಿದ್ದಾರೆ. ವ್ಯಾಪಾರಿ ರಮೇಶ್ ಕೋಟ್ಯಾಂತರ ರೂಪಾಯಿ ಆಸ್ತಿ ಹೊಂದಿದ್ದು, ಹಣ ವಸೂಲಿ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More