Loading video

ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್, ದೋವಲ್ ಭಾಗಿ

Updated on: Apr 29, 2025 | 6:54 PM

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ತಂತ್ರ ರೂಪಿಸುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆದಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್ಎಸ್ಎ ಅಜಿತ್ ದೋವಲ್, ಸಿಡಿಎಸ್, ಮೂರು ಸೇನಾ ಮುಖ್ಯಸ್ಥರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ಏನೆಲ್ಲ ಚರ್ಚೆಯಾಯಿತು ಎಂಬುದರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ನವದೆಹಲಿ, ಏಪ್ರಿಲ್ 29: ಏಪ್ರಿಲ್ 22ರಂದು ನಡೆದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯ (Pahalgam Terror Attack) ನಂತರ ಇಂದು ನವದೆಹಲಿಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆಗಳನ್ನು ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರು ಸೇನೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ನಡೆಸಿದರು. ಪಾಕ್​ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದ ಬಳಿಕ ಮುಂದಿನ ಕಾರ್ಯತಂತ್ರಕ್ಕಾಗಿ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 29, 2025 06:51 PM