ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ

Edited By: ವಿವೇಕ ಬಿರಾದಾರ

Updated on: Apr 23, 2025 | 5:50 PM

ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯಲ್ಲಿ 27 ಜನರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ 13 ಜನರು ಕಾಶ್ಮೀರ ಪ್ರವಾಸದಲ್ಲಿದ್ದರು ಮತ್ತು ಅದೃಷ್ಟವಶಾತ್ ದಾಳಿಯಿಂದ ಪಾರಾಗಿದ್ದಾರೆ. ಕಿಶೋರ್, ಸೂರಜ್, ಗಿರೀಶ್ ಕಾಸಟ್ ಮತ್ತು ನಿತೀಶ್ ಬಂಗ್ ಕುಟುಂಬಗಳು ಈ ಅಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿ. ಅವರ ಅನುಭವ ಮತ್ತು ಪಾರಾಗುವಿಕೆಯ ಕಥೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಬಾಗಲಕೋಟೆ, ಏಪ್ರಿಲ್​ 23: ಜಮ್ಮು-ಕಾಶ್ಮೀರದ (Jammu-Kashmir) ಪಹಲ್ಗಾಮ್​ನಲ್ಲಿ ಬುಧವಾರ ಸಂಜೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ (Pahalgam Terror Attack) ನಡೆಸಿದ್ದಾರೆ. ಉಗ್ರರ ಗುಂಡಿಗೆ ಇಬ್ಬರು ಕನ್ನಡಿಗರು ಸೇರಿದಂತೆ 27 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ 13 ಜನರು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದು, ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೇಪ್​ ಆಗಿದ್ದಾರೆ. ಕಿಶೋರ್ ಕಾಸಟ್, ಸೂರಜ್ ಕಾಸಟ್, ಗಿರೀಶ್ ಕಾಸಟ್, ನಿತೀಶ್ ಬಂಗ್ ನಾಲ್ಕು ಕುಟುಂಬ ಕಾಶ್ಮೀರ ಪ್ರವಾಸಕ್ಕೆ ತೆರಳಿದೆ. ಉಗ್ರರ ದಾಳಿಯಿಂದ ತಾವು ಹೇಗೆ ಪಾರಾದೇವು ಎಂದು ಆನಂದ ಕಾಸಟ್ ಟಿವಿ9ಗೆ ತಳಿಸಿದ್ದಾರೆ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More