ಕರ್ನಾಟಕದಲ್ಲಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ ಇಟ್ಟ ಗೃಹ ಸಚಿವ
ಪಹಲ್ಗಾಮ್ ದಾಳಿ ಬೆನ್ನಲ್ಲೇ ಕೇಂದ್ರ ಸರ್ಕಾರ ಪಾಕಿಸ್ತಾನ ವಿರುದ್ಧ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದು, ಭಾರತದಲ್ಲಿ ನೆಲೆಸಿರೋ ಪಾಕಿಸ್ತಾನ ಪ್ರಜೆಗಳನ್ನು ಪಟ್ಟಿ ಮಾಡಿ ಅವರ ದೇಶಕ್ಕೆ ಕಳುಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಎಲ್ಲಾ ಮುಖ್ಯಂತ್ರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ರಾಜ್ಯ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮಡಿಕೇರಿ, (ಏಪ್ರಿಲ್ 27): ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಇಡೀ ದೇಶವೇ ಖಂಡನೆ ವ್ಯಕ್ತಪಡಿಸುತ್ತಿದೆ. ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ ಒಂದಲ್ಲಾ ಎರಡಲ್ಲ ಬರೋಬ್ಬರಿ 26 ಅಮಾಯಕರ ಜೀವ ಬಲಿಯಾಗಿದೆ. ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದು, ಭಾರತದಲ್ಲಿ ನೆಲೆಸಿರೋ ಪಾಕಿಸ್ತಾನ ಪ್ರಜೆಗಳನ್ನು ಪಟ್ಟಿ ಮಾಡಿ ಅವರ ದೇಶಕ್ಕೆ ಕಳುಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಎಲ್ಲಾ ಮುಖ್ಯಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ರಾಜ್ಯ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪಾಕ್ ಪ್ರಜೆಗಳ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಎಲ್ಲಾ ಎಸ್ಪಿಗಳಿಗೆ ಸೂಚಿಸಲಾಗಿದ್ದು, ಈಗಾಗಲೇ ಅಂಕಿ ಅಂಶಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ವರದಿ ಬಂದ ಕೂಡಲೇ ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಲವರಿಗೆ ವಿನಾಯಿತಿ ನೀಡಿದೆ. ದೀರ್ಘಾವಧಿ ವೀಸಾ, ಮದುವೆ ಆಗಿರುವವರಿಗೆ ವಿನಾಯಿತಿ ನೀಡಿದೆ. ಅವರನ್ನು ಹೊರತುಪಡಿಸಿ ಉಳಿದೆಲ್ಲರನ್ನೂ ಹೊರಕಳಿಸಲಾಗುತ್ತೆ. ಅಲ್ಪಾವಧಿ ವೀಸಾ, ವಿದ್ಯಾರ್ಥಿ, ಪ್ರವಾಸಿಗರ ವೀಸಾ ಸೇರಿ ಇತರೆ ವೀಸಾದಡಿಯಲ್ಲಿ ಇರುವವರನ್ನು ಕಳಿಸುತ್ತೇವೆ ಎಂದು ಹೇಳಿದರು.
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

