ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರದಿಂದ ಇನ್ನೇನು ನಿರೀಕ್ಷೆ ಸಾಧ್ಯ: ತೇಜಸ್ವಿ ಸೂರ್ಯ ವಾಗ್ದಾಳಿ
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದವರ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ ಕೊಡಿಸುವ ಭರವಸೆ ನೀಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಕಡಿಮೆ ಪರಿಹಾರ ನೀಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ರೋಶಾವೇಷದಿಂದ ವಾಗ್ದಾಳಿ ನಡೆಸಿದರು. ಜಗತೆಗೆ, 1 ಕೋಟಿ ರೂ. ಪರಿಹಾರಕ್ಕೆ ಆಗ್ರಹಿಸಿದರು.
ಬೆಂಗಳೂರು, ಏಪ್ರಿಲ್ 28: ಪಕ್ಕದ ರಾಜ್ಯದಲ್ಲಿ ಆನೆ ದಾಳಿಗೆ ಬಲಿಯಾದವರಿಗೆ 15 ಲಕ್ಷ ರೂ. ಪರಿಹಾರ ನೀಡುವ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ, ನಮ್ಮದೇ ರಾಜ್ಯದವರು ಭಯೋತ್ಪಾದಕ ದಾಳಿಯಲ್ಲಿ ಭೀಕರವಾಗಿ ಹತ್ಯೆಯಾದಾಗ ಅವರ ಕುಟುಂಬ ನಿರ್ವಹಣೆಗೆ ಸಾಕಾಗುವಷ್ಟು ಪರಿಹಾರ ನೀಡುವ ಯೋಗ್ಯತೆ ಇಲ್ಲ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಟೀಕಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ಮುಸ್ಲಿಮರ ಓಟಿಗೆ ತನ್ನನ್ನು ತಾನು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದಿಂದ ಇದಕ್ಕಿಂತ ಹೆಚ್ಚಿಗೆ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದರು. ಅಲ್ಲದೆ, ಕನಿಷ್ಠ ಮಾನವೀಯತೆ ಇದ್ದಿದ್ದರೆ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ನೀಡುತ್ತಿತ್ತು ಎಂದರು.
ಮತ್ತಷ್ಟು ಮಾಹಿತಿ: ಮಂಜುನಾಥ್, ಭರತ್ ಭೂಷಣ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
Latest Videos

