ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

Edited By:

Updated on: Apr 26, 2025 | 10:13 PM

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯನ್ನು ಖಂಡಿಸಿ ಮೈಸೂರಿನಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳು ಪ್ರತಿಭಟನೆ ನಡೆಸಿದರು. ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಮೊಂಬತ್ತಿ ಮೆರವಣಿಗೆ ನಡೆಸಿ, ಶಾಂತಿಯುತ ಪ್ರತಿಭಟನೆ ಮಾಡಿದರು. ಮೃತರ ಆತ್ಮಕ್ಕೆ ಶಾಂತಿ ಕೋರಿದರು ಮತ್ತು ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಬೆಳಗಾವಿ, ಏಪ್ರಿಲ್​ 26: ಜಮ್ಮು-ಕಾಶ್ಮೀರದ (Jammu-Kashmir) ಪಹಲ್ಗಾಮ್​ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ (Pahalgam Terarist attack) ನಡೆಸಿದ್ದಾರೆ. ಇದನ್ನು ಖಂಡಿಸಿ ಮೈಸೂರಿನಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳು ಪ್ರತಿಭಟನೆ ನಡೆಸಿದರು. ಪಾಕಿಸ್ತಾನಕ್ಕೆ ಮುರ್ದಾಬಾದ್ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೊಂಬತ್ತಿ ಹಿಡಿದು ಮೈಸೂರಿನ ಮಿಲಾದ್ ಪಾರ್ಕ್ ಬಳಿಯಿಂದ ಶಾಂತಿ ಮೆರವಣಿಗೆ ನಡೆಸಿದರು. ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಪಾಕಿಸ್ಥಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ. ನಿಜಕ್ಕೂ ನಮಗೆ ನೋವಾಗಿದೆ ಆರು ದಿನ ಆಗಿತ್ತು ಮದುವೆಯಾಗಿ. ಆ ಹೆಣ್ಣು‌ ಮಗು ನೋಡಿ ದುಖಃವಾಗಿದೆ. ಉಗ್ರರನ್ನು ಹಿಡಿದು ನಮ್ಮ ಮುಂದೆ ಸಾಯಿಸಿ. ಆಗ ನಮಗೆ ಸಮಾಧಾನ ಆಗುತ್ತದೆ ಎಂದರು.