ಒಳ್ಳೆ ಮನುಷ್ಯ: ಅಪಘಾತದಲ್ಲಿ ಮೃತಪಟ್ಟ ಬಾಸ್ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ನೆಲಮಂಗಲ ತಾಲೂಕಿನ ತಾಳೇಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಮೃತಪಟ್ಟಿದ್ದಾರೆ. IAST ಸಾಫ್ಟ್‌ವೇರ್ ಕಂಪನಿ ಮಾಲೀಕ ಸೇರಿದಂತೆ ದುರ್ಮರಣ ಹೊಂದಿದ್ದಾರೆ. ಈ ದುರಂತದಿಂದ ಕಂಪನಿಯ ಸಿಬ್ಬಂದಿಗಳು ಆಘಾತಕ್ಕೊಳಗಾಗಿದ್ದಾರೆ. ತಮ್ಮ ಬಾಸ್ ಬಗ್ಗೆ ಏನು ಹೇಳಿದ್ದಾರೆ ಕೇಳಿ.
ನೆಲಮಂಗಲ, ಡಿಸೆಂಬರ್ 21: ಬೆಂಗಳೂರು ಗ್ರಾಮಾಮತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೇಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, IAST ಸಾಫ್ಟ್‌ವೇರ್ ಕಂಪನಿ ಮಾಲೀಕ ಸೇರಿದಂತೆ 6 ಜನರು ದುರ್ಮರಣ ಹೊಂದಿದ್ದಾರೆ. ಸಾಫ್ಟ್‌ವೇರ್ ಕಂಪನಿ ಮಾಲೀಕನ ಸಾವಿನಿಂದ ಸದ್ಯ ಸಿಬ್ಬಂದಿಗಳು ಶಾಕ್ ಆಗಿದ್ದಾರೆ. ಈ ಬಗ್ಗೆ ಸಿಬ್ಬಂದಿ ಚೇತನ್ ಎಂಬುವವರು ಮಾತನಾಡಿದ್ದು, ನಮ್ಮ ಬಾಸ್ ಒಳ್ಳೆ ಮನುಷ್ಯ. ಯಾರದ್ದೋ ತಪ್ಪಿಗೆ ಹೀಗಾಗಿರುವುದುಕ್ಕೆ ತುಂಬಾ ನೋವಾಗುತ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.