PAK vs SA, ICC World Cup: ಪಾಕ್ ವಿರುದ್ಧ ದ. ಆಫ್ರಿಕಾ ಜಯ ಸಾಧಿಸಿದಾಗ ಚೆನ್ನೈನಲ್ಲಿ ಫ್ಯಾನ್ಸ್ ಏನು ಮಾಡಿದ್ರು ನೋಡಿ

|

Updated on: Oct 28, 2023 | 9:33 AM

MA Chidambaram Stadium Fans: ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಸಂದರ್ಭ ಚೆಪಾಕ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ಆಫ್ರಿಕಾ ತಂಡಕ್ಕೆ ಎದ್ದುನಿಂತು ಚಪ್ಪಾಳೆ ತಟ್ಟಿ ಗೌರವಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಶುಕ್ರವಾರ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (Pakistan vs South Africa) ತಂಡ 1 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಚೆನ್ನೈನ ಎಮ್​ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. 9 ವಿಕೆಟ್ ಕಳೆದುಕೊಂಡು ಸೋಲಿನ ಅಂಚಿನಲ್ಲಿದ್ದ ಆಫ್ರಿಕಾ ತಂಡಕ್ಕೆ ಕೇಶವ್ ಮಹರಾಜ್ ರೋಚಕ ಜಯ ತಂದು ಕೊಟ್ಟರು. ಈ ಸಂದರ್ಭ ಚೆಪಾಕ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ಆಫ್ರಿಕಾ ತಂಡಕ್ಕೆ ಎದ್ದುನಿಂತು ಚಪ್ಪಾಳೆ ತಟ್ಟಿ ಗೌರವಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ 46.4 ಓವರ್​ಗಳಲ್ಲಿ 270 ರನ್ ಗಳಿಸಿದರೆ, ಆಫ್ರಿಕಾ 47.2 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 271 ರನ್ ಗಳಿಸಿ ಜಯ ಸಾಧಿಸಿತು. ಈ ಗೆಲುವಿನ ಮೂಲಕ ದಕ್ಷಿಣ ಆಫ್ರಿಕಾ ತಂಡ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ