ರಣರೋಚಕ ಮ್ಯಾಚ್… ಪಾಕಿಸ್ತಾನ್ ಚಾಂಪಿಯನ್ಸ್
Bangladesh A vs Pakistan A, Final: ಸೂಪರ್ ಓವರ್ನಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 3 ಎಸೆತಗಳಲ್ಲಿ 6 ರನ್ಗಳಿಸಿ 2 ವಿಕೆಟ್ ಕಳೆದುಕೊಂಡಿತು. ಅದರಂತೆ 7 ರನ್ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು 4 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲಕ ರೋಚಕ ಜಯ ಸಾಧಿಸಿತು.
ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ್ ಎ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೋಹಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ಎ ಮತ್ತು ಬಾಂಗ್ಲಾದೇಶ್ ಎ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 125 ರನ್ಗಳಿಸಿ ಆಲೌಟ್ ಆಯಿತು.
126 ರನ್ಗಳ ಗುರಿ ಪಡೆದ ಬಾಂಗ್ಲಾದೇಶ್ ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು 125 ರನ್ಗಳು. ಇದರೊಂದಿಗೆ ಪಂದ್ಯವು ಟೈನಲ್ಲಿ ಅಂತ್ಯಗೊಂಡಿತು. ಅಲ್ಲದೆ ಫಲಿತಾಂಶ ನಿರ್ಣಯಕ್ಕಾಗಿ ಸೂಪರ್ ಓವರ್ ಆಡಿಸಲಾಯಿತು.
ಸೂಪರ್ ಓವರ್ನಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 3 ಎಸೆತಗಳಲ್ಲಿ 6 ರನ್ಗಳಿಸಿ 2 ವಿಕೆಟ್ ಕಳೆದುಕೊಂಡಿತು. ಅದರಂತೆ 7 ರನ್ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು 4 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲಕ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಪಾಕಿಸ್ತಾನ್ ಎ ತಂಡವು ಮೂರನೇ ಬಾರಿಗೆ ರೈಸಿಂಗ್ ಸ್ಟಾರ್ಸ್ (ಎಮರ್ಜಿಂಗ್) ಏಷ್ಯಾಕಪ್ ಟ್ರೋಫಿ ಗೆದ್ದುಕೊಂಡಿದೆ.

