ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು
ರಾವಲ್ಪಿಂಡಿಯಲ್ಲಿರುವ ಸೇನೆಯ ಮುಖ್ಯ ಪ್ರಧಾನ ಕಚೇರಿಯ ಮುಖ್ಯ ದ್ವಾರದ ಬಳಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರ ಪ್ರವೇಶ ತಪಾಸಣಾ ಕೇಂದ್ರದ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಮಿಲಿಟರಿ ಕಮಾಂಡ್ ಸೆಂಟರ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಪ್ರತಿದಾಳಿ ನಡೆಸಿದ್ದಾರೆ. ಆದರೂ ಈ ಘಟನೆಯಲ್ಲಿ ಪಾಕಿಸ್ತಾನದ ಓರ್ವ ಸೈನಿಕ ಮೃತಪಟ್ಟಿದ್ದಾರೆ. ಎರಡೂ ಕಡೆಗಳಿಂದ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಸೇನೆಯ ಓರ್ವ ಯೋಧ ಕರ್ತವ್ಯ ನಿರತರಾಗಿದ್ದಾಗಲೇ ಮೃತರಾಗಿದ್ದಾರೆ.
ರಾವಲ್ಪಿಂಡಿ, ಆಗಸ್ಟ್ 11: ಪಾಕಿಸ್ತಾನದ (Pakistan) ರಾವಲ್ಪಿಂಡಿಯಲ್ಲಿರುವ ಸೇನೆಯ ಮುಖ್ಯ ಪ್ರಧಾನ ಕಚೇರಿಯ ಮುಖ್ಯ ದ್ವಾರದ ಬಳಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರ ಪ್ರವೇಶ ತಪಾಸಣಾ ಕೇಂದ್ರದ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಮಿಲಿಟರಿ ಕಮಾಂಡ್ ಸೆಂಟರ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಪ್ರತಿದಾಳಿ ನಡೆಸಿದ್ದಾರೆ. ಆದರೂ ಈ ಘಟನೆಯಲ್ಲಿ ಪಾಕಿಸ್ತಾನದ ಓರ್ವ ಸೈನಿಕ ಮೃತಪಟ್ಟಿದ್ದಾರೆ.
ಎರಡೂ ಕಡೆಗಳಿಂದ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಸೇನೆಯ ಓರ್ವ ಯೋಧ ಕರ್ತವ್ಯ ನಿರತರಾಗಿದ್ದಾಗಲೇ ಮೃತರಾಗಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಚೇರಿಯ ಒಳಭಾಗದ ಭದ್ರತಾ ವಲಯಕ್ಕೆ ನುಗ್ಗಲು ಯತ್ನಿಸುತ್ತಿದ್ದ ದಾಳಿಕೋರನನ್ನು ಭದ್ರತಾ ಪಡೆಗಳು ಸ್ಥಳದಲ್ಲೇ ಹೊಡೆದುರುಳಿಸಿವೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

