ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ; ಪಾಕ್ ವಿರುದ್ಧ ಮತ್ತೆ ಆಕ್ರೋಶ
ಭಾರತ ನಡೆಸಿದ 'ಆಪರೇಷನ್ ಸಿಂಧೂರ್'ನಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಸಹಚರರು ಸಾವನ್ನಪ್ಪಿದ್ದಾರೆ. ಇಂದು ಬೆಳಗಿನ ಜಾವ 1.05ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜೈಶ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ 9 ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ದಾಳಿ ಮಾಡಿದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು 26 ಜನರನ್ನು ಕೊಂದ ಪಹಲ್ಗಾಮ್ ಹತ್ಯಾಕಾಂಡಕ್ಕೆ ಭಾರತ ನೀಡಿದ ಪ್ರತಿಕ್ರಿಯೆಯಾಗಿ 'ಆಪರೇಷನ್ ಸಿಂಧೂರ್'ನ ಭಾಗವಾಗಿ ಬಹವಾಲ್ಪುರದ ಸುಭಾನ್ ಅಲ್ಲಾ ಸಂಕೀರ್ಣದ ಮೇಲಿನ ದಾಳಿಗಳು ಭಾರತ ನಡೆಸಿದ 2 ಮಹತ್ವದ ದಾಳಿಗಳಲ್ಲಿ ಒಂದಾಗಿದೆ.
ನಾವು ಭಯೋತ್ಪಾದನೆಗೆ ಯಾವುದೇ ಪ್ರೋತ್ಸಾಹ ನೀಡುವುದಿಲ್ಲ. ಉಗ್ರರಿಗೂ ನಮಗೂ ಸಂಬಂಧವೇ ಇಲ್ಲವೆಂದು ಹೇಳಿಕೆ ನೀಡಿದ್ದ ಪಾಕಿಸ್ತಾನದ (Pakistan) ಅಸಲಿ ಮುಖ ಇದೀಗ ಹೊರಬಿದ್ದಿದೆ. ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಉಗ್ರರು ಹಾಗೂ ಉಗ್ರರ ಕುಟುಂಬದವರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ ಅಂತಿಮ ದರ್ಶನ ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಮೋಸ್ಟ್ ವಾಂಟೆಡ್ ಉಗ್ರ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಅವರ ಕುಟುಂಬಸ್ಥರ ಶವದ ಪೆಟ್ಟಿಗೆಗೆ ಪಾಕಿಸ್ತಾನದ ಧ್ವಜವನ್ನು ಸುತ್ತಿ ಸರ್ಕಾರಿ ಗೌರವ ನೀಡಲಾಗಿದೆ. ಈ ವಿಡಿಯೋ ಪಾಕಿಸ್ತಾನದ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 07, 2025 08:17 PM
Latest Videos

