Operation Sindoor: ಭಾರತ ಉಗ್ರರ ನೆಲೆಗಳ ದಾಳ ಮಾಡಿದರೆ ಪೂಂಚ್ ಭಾಗದಲ್ಲಿ ಪಾಕಿಸ್ತಾನ ಸೇನೆಯಿಂದ ನಾಗರಿಕ ನೆಲೆಗಳ ಮೇಲೆ ದಾಳಿ

ಅರುಣ್​ ಕುಮಾರ್​ ಬೆಳ್ಳಿ

Updated on: May 07, 2025 | 2:21 PM

ಭಾರತೀಯ ಸೇನೆ ನಿನ್ನೆ ರಾತ್ರಿ ಆಪರೇಷನ್ ಸಿಂಧೂರ ಅರಂಭಿಸಿ ಉಗ್ರರ ಒಂಬತ್ತು ತಾಣಗಳ ಮೇಲೆ ದಾಳಿ ನಡೆಸಿ ಅವರ ನೆಲೆಗಳನ್ನು ಧ್ವಂಸಗೊಳಿಸಿದೆ. ದಾಳಿಯಲ್ಲಿ ಎಷ್ಟು ಭಯೋತ್ಪಾದಕರು ಹತರಾಗಿದ್ದಾರೆ ಇನ್ನೂ ನಿಖರವಾಗಿ ಗೊತ್ತಾಗಿಲ್ಲ. ಭಾರತದ ದಾಳಿಯಿಂದ ಪಾಕಿಸ್ತಾನ ಕಂಗಾಲಾಗಿದೆ ಮತ್ತು ಇತರ ನೆರೆರಾಷ್ಟ್ರಗಳ ಕಡೆ ದೀನತೆಯಿಂದ ನೋಡುತ್ತಿದೆ, ಚೀನಾ ಸೇರಿದಂತೆ ಯಾವ ದೇಶವೂ ಅದರ ನೆರವಿಗೆ ಬರಲಾರದು.

ಪೂಂಚ್ (ಜಮ್ಮು ಮತ್ತು ಕಾಶ್ಮೀರ), ಮೇ 7: ಕೈಲಾಗದವನು ಮೈ ಪರಚಿಕೊಂಡಿದ್ದನಂತೆ, ಪಾಕಿಸ್ತಾನದ ಸೇನೆಗೆ ಈ ಮಾತು ಬಹಳ ಸೂಕ್ತವಾಗಿ ಅನ್ವಯಿಸುತ್ತದೆ. ಭಾರತೀಯ ಸೇನೆ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರೆ ಅದನ್ನು ಸಹಿಸಿಕೊಳ್ಳಲಾಗದ ಪಾಕಿಸ್ತಾನದ ಸೇನೆ (Pakistan army ) ಪೂಂಚ್ ಪ್ರದೇಶದಲ್ಲಿ ಜನ ವಾಸವಾಗಿರುವ ಪ್ರದೇಶಗಳು, ರಸ್ತೆಗಳ ಮೇಲೆ ದಾಳಿ ನಡೆಸಿದೆ. ಮನೆ ಮತ್ತು ಅಂಗಡಿಗಳಿಗೆ ಗುಂಡು ತಾಕಿರುವುದನ್ನು ದೃಶ್ಯಗಳಲ್ಲಿ ಗಮನಿಸಬಹುದು. ಪಾಕಿಸ್ತಾನಕ್ಕೆ ಇದನ್ನು ಮಾತ್ರ ಮಾಡಲು ಸಾಧ್ಯ. ಅಮಾಯಕ ಪ್ರವಾಸಿಗರು, ಮನೆಗಳಲ್ಲಿರುವ ನಿರಾಯಧ ನಾಗರಿಕರು ಮಾತ್ರ ಅದರ ಟಾರ್ಗೆಟ್! ಅದರ ಹೇಡಿತನದಿಂದ ಗಡಿಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಗೊಂಡಿದೆ.

ಇದನ್ನೂ ಓದಿ: Operation Sindoor: ಆಪರೇಷನ್ ಸಿಂಧೂರ್, ಪಿಒಕೆ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.