AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಯುದ್ಧ ಘೋಷಿಸುವ ಭೀತಿ; ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ

ಭಾರತ ಯುದ್ಧ ಘೋಷಿಸುವ ಭೀತಿ; ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ

ಸುಷ್ಮಾ ಚಕ್ರೆ
|

Updated on:May 03, 2025 | 6:20 PM

ಪಾಕಿಸ್ತಾನಿ ಸೇನೆಯು ಪಿಒಕೆಯಲ್ಲಿ ತರಬೇತಿ ಶಿಬಿರಗಳನ್ನು ಸ್ಥಾಪಿಸಿದ್ದು, ಅಲ್ಲಿ ಸ್ಥಳೀಯರಿಗೆ ಶಸ್ತ್ರಾಸ್ತ್ರಗಳನ್ನು ನಿರ್ವಹಿಸಲು ತರಬೇತಿ ನೀಡಲಾಗುತ್ತಿದೆ. ಪಾಕಿಸ್ತಾನಿ ಪಡೆಗಳು ಭಾರತದೊಂದಿಗಿನ ಯುದ್ಧದಲ್ಲಿ ಭಾಗವಹಿಸಲು ಹಿಂಜರಿಯುತ್ತಿವೆ ಮತ್ತು ಹಲವಾರು ಸೈನಿಕರು ಪಾಕಿಸ್ತಾನ ಸೇನೆಯನ್ನು ತೊರೆದಿದ್ದಾರೆ ಎಂಬ ವರದಿಗಳ ಮಧ್ಯೆ ಈ ವೀಡಿಯೊ ಬಹಿರಂಗವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಭಾರತ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿರುವುದರಿಂದ ಪಾಕಿಸ್ತಾನವು ತನ್ನ ರಕ್ಷಣೆಯನ್ನು ಬಲಪಡಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ನವದೆಹಲಿ, ಮೇ 3: ಪಹಲ್ಗಾಮ್ ದಾಳಿಯ ನಂತರ ಭಾರತೀಯ ಸೇನೆ (Indian Army) ಪ್ರತೀಕಾರದ ಎಚ್ಚರಿಕೆ ನೀಡಿದೆ. ಹೀಗಾಗಿ, ಭಾರತ ಯಾವ ಸಮಯದಲ್ಲಿ ಬೇಕಾದರೂ ಯುದ್ಧ ಸಾರಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ ಯುದ್ಧಕ್ಕೆ ಸಕಲ ಸಿದ್ಧತೆಗಳನ್ನು ನಡೆಸಿದೆ. ಯುದ್ಧಕ್ಕೆ ಸಜ್ಜಾಗಲು ಪಾಕಿಸ್ತಾನಿ ಸೇನೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಸ್ಥಳೀಯ ನಾಗರಿಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದೆ. ಇದರ ವಿಡಿಯೋ ವೈರಲ್ ಆಗಿದೆ. ಇದೇ ರೀತಿ 1990ರ ದಶಕದಲ್ಲಿ ಪಾಕಿಸ್ತಾನ ಪಿಒಕೆಯಲ್ಲಿ ಸ್ಥಳೀಯ ಯುವಕರನ್ನು ಶಸ್ತ್ರಸಜ್ಜಿತಗೊಳಿಸಿ ತರಬೇತಿ ನೀಡಿ, ಅವರನ್ನು ಭಯೋತ್ಪಾದಕ ಗುಂಪುಗಳಿಗೆ ಸೇರಿಸಿಕೊಂಡು ಭಾರತದ ಪ್ರದೇಶಕ್ಕೆ ಕಳುಹಿಸುವ ತಂತ್ರದ ಪುನರಾವರ್ತನೆ ಆಗಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಭಾರತದ ಬಲವಾದ ಪ್ರತೀಕಾರದ ಪ್ರತಿಜ್ಞೆಯ ಬಳಿಕ ಭಾರತದ ಆಕ್ರಮಣಕಾರಿ ಕ್ರಮಗಳನ್ನು ತಡೆದುಕೊಳ್ಳಲು ಪಾಕಿಸ್ತಾನಿ ಸೇನೆಯು ಪಿಒಕೆಯಲ್ಲಿ ಸ್ಥಳೀಯರಿಗೆ ತರಬೇತಿ ನೀಡುತ್ತಿದೆ. 26 ಅಮಾಯಕ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಸಂಬಂಧಗಳು ಹದಗೆಡುತ್ತಿವೆ. ಸಂಬಂಧಗಳು ಹದಗೆಡುತ್ತಿದೆ. ಇದರ ನಡುವೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಭಾರತ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿರುವುದರಿಂದ ಪಾಕಿಸ್ತಾನವು ತನ್ನ ರಕ್ಷಣೆಯನ್ನು ಬಲಪಡಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪಾಕಿಸ್ತಾನಿ ಸೇನೆಯು ಪಿಒಕೆಯಲ್ಲಿ ತರಬೇತಿ ಶಿಬಿರಗಳನ್ನು ಸ್ಥಾಪಿಸಿದ್ದು, ಅಲ್ಲಿ ಸ್ಥಳೀಯರಿಗೆ ಶಸ್ತ್ರಾಸ್ತ್ರಗಳನ್ನು ನಿರ್ವಹಿಸಲು ತರಬೇತಿ ನೀಡಲಾಗುತ್ತಿದೆ. ಪಾಕಿಸ್ತಾನಿ ಪಡೆಗಳು ಭಾರತದೊಂದಿಗಿನ ಯುದ್ಧದಲ್ಲಿ ಭಾಗವಹಿಸಲು ಹಿಂಜರಿಯುತ್ತಿವೆ ಮತ್ತು ಹಲವಾರು ಸೈನಿಕರು ಪಾಕಿಸ್ತಾನ ಸೇನೆಯನ್ನು ತೊರೆದಿದ್ದಾರೆ ಎಂಬ ವರದಿಗಳ ಮಧ್ಯೆ ಈ ವೀಡಿಯೊ ಬಹಿರಂಗವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: May 03, 2025 06:19 PM