ಪಾಕ್ ಬೌಲರ್‌ಗಳ ಬೆಂಡೆತ್ತಿದ ರಶೀದ್ ಖಾನ್
Pakistan vs Afghanistan: ರಶೀದ್ ಖಾನ್ 18ನೇ ಓವರ್‌ನ ಕೊನೆಯ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. ರಶೀದ್ ಖಾನ್ ವಿಕೆಟ್ ಸಿಗುತ್ತಿದ್ದಂತೆ ಕಂಬ್ಯಾಕ್ ಮಾಡಿದ ಪಾಕ್ ಬೌಲರ್‌ಗಳು 19.5 ಓವರ್‌ಗಳಲ್ಲಿ ಅಫ್ಘಾನಿಸ್ತಾನ್ ತಂಡವನ್ನು 143 ರನ್ ಗೆ ಆಲೌಟ್ ಮಾಡಿದರು. ಈ ಮೂಲಕ ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ಪಾಕ್ ಪಡೆ 39 ರನ್ ಗಳ ಜಯ ಸಾಧಿಸಿದೆ.
ಶಾರ್ಜಾದಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಪರ ನಾಯಕ ಸಲ್ಮಾನ್ ಅಲಿ ಅಘಾ 36 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ ಗಳೊಂದಿಗೆ 53 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಪಾಕಿಸ್ತಾನ್ ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು.
ಈ ಕಠಿಣ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಪರಿಣಾಮ 12 ಓವರ್‌ಗಳ ಮುಕ್ತಾಯದ ವೇಳೆ 3 ವಿಕೆಟ್ ಕಳೆದುಕೊಂಡು 93 ರನ್ ಕಲೆಹಾಕಿತು.
ಈ ಹಂತದಲ್ಲಿ ದಿಢೀರ್ ಕುಸಿತಕ್ಕೊಳಗಾದ ಅಫ್ಘಾನಿಸ್ತಾನ್ ಬ್ಯಾಕ್ ಟು ಬ್ಯಾಕ್ 4 ವಿಕೆಟ್ ಕಳೆದುಕೊಂಡಿತು. ಇದಾಗ್ಯೂ ಅಫ್ಘಾನ್ ಪಡೆಯ ಹೋರಾಟ ಮುಂದುವರೆಯಿತು.
ಹೀಗೆ ಏಕಾಂಗಿ ಹೋರಾಟ ನಡೆಸಿದ್ದು ನಾಯಕ ರಶೀದ್ ಖಾನ್. ಪಾಕಿಸ್ತಾನ್ ಬೌಲರ್‌ಗಳ ಬೆಂಡೆತ್ತಿದ ರಶೀದ್ ಖಾನ್ ಕೇವಲ 16 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 1 ಫೋರ್ ನೊಂದಿಗೆ 39 ರನ್ ಚಚ್ಚಿದರು.
ಆದರೆ 18ನೇ ಓವರ್‌ನ ಕೊನೆಯ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. ರಶೀದ್ ಖಾನ್ ವಿಕೆಟ್ ಸಿಗುತ್ತಿದ್ದಂತೆ ಕಂಬ್ಯಾಕ್ ಮಾಡಿದ ಪಾಕ್ ಬೌಲರ್‌ಗಳು 19.5 ಓವರ್‌ಗಳಲ್ಲಿ ಅಫ್ಘಾನಿಸ್ತಾನ್ ತಂಡವನ್ನು 143 ರನ್ ಗೆ ಆಲೌಟ್ ಮಾಡಿದರು. ಈ ಮೂಲಕ ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ಪಾಕ್ ಪಡೆ 39 ರನ್ ಗಳ ಜಯ ಸಾಧಿಸಿದೆ.

