AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಶಕಗಳ ಬಳಿಕ ಹೊಸ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್

3 ದಶಕಗಳ ಬಳಿಕ ಹೊಸ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್

ಝಾಹಿರ್ ಯೂಸುಫ್
|

Updated on: Nov 09, 2025 | 8:54 AM

Share

Pakistan vs South Africa: ಸೌತ್ ಆಫ್ರಿಕಾ ನೀಡಿದ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 25.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 144 ರನ್​ ಗಳಿಸಿ 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ ತವರಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಏಕದಿನ ಸರಣಿ ಗೆಲ್ಲುವ ಪಾಕ್ ತಂಡದ ಮೂರು ದಶಕಗಳ ಕನಸು ಕೊನೆಗೂ ಈಡೇರಿದೆ.

ಪಾಕಿಸ್ತಾನ್ ಹಾಗೂ ಸೌತ್ ಆಫ್ರಿಕಾ ನಡುವೆ ಏಕದಿನ ಸರಣಿ ಶುರುವಾಗಿ 33 ವರ್ಷಗಳೇ ಕಳೆದಿವೆ. ಈ ಮೂವತ್ತ ಮೂರು ವರ್ಷಗಳಲ್ಲಿ ಪಾಕಿಸ್ತಾನ್ ತಂಡವು ಒಮ್ಮೆಯೂ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಏಕದಿನ ಸರಣಿ ಗೆದ್ದಿರಲಿಲ್ಲ. ಆದರೆ ಈ ಬಾರಿ ಸೌತ್ ಆಫ್ರಿಕಾ ಪಡೆಯನ್ನು 2-1 ಅಂತರದಿಂದ ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಈ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಫೈಸಲಾಬಾದ್​ನಲ್ಲಿ ನಡೆದ ದ್ವಿತೀಯ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿತ್ತು.

ಇದೀಗ ಮೂರನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಫೈಸಲಾಬಾದ್​ನ ಇಕ್ಬಾಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 37.5 ಓವರ್​ಗಳಲ್ಲಿ 143 ರನ್​ಗಳಿಸಿ ಆಲೌಟ್ ಆಗಿತ್ತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 25.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 144 ರನ್​ ಗಳಿಸಿ 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ ತವರಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಏಕದಿನ ಸರಣಿ ಗೆಲ್ಲುವ ಪಾಕ್ ತಂಡದ ಮೂರು ದಶಕಗಳ ಕನಸು ಕೊನೆಗೂ ಈಡೇರಿದೆ.

 

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More