ಎದ್ದು ಬಿದ್ದು ಕೊನೆಗೂ ಗೆದ್ದ ಪಾಕಿಸ್ತಾನ್
Pakistan vs South Africa, 1st ODI: 264 ರನ್ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಸೈಮ್ ಅಯ್ಯೂಬ್ (39) ಹಾಗೂ ಫಖರ್ ಝಮಾನ್ (45) ಉತ್ತಮ ಆರಂಭ ಒದಗಿಸಿದ್ದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ 55 ರನ್ಗಳ ಕೊಡುಗೆ ನೀಡಿದರು. ಆ ಬಳಿಕ ಬಂದ ಸಲ್ಮಾನ್ ಅಲಿ ಅಘಾ 62 ರನ್ ಬಾರಿಸಿದರು.
ಫೈಸಲಾಬಾದ್ನ ಇಕ್ಬಾಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಶಾಹೀನ್ ಅಫ್ರಿದಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ 63 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 49.1 ಓವರ್ಗಳಲ್ಲಿ 263 ರನ್ಗಳಿಸಿ ಆಲೌಟ್ ಆಯಿತು.
264 ರನ್ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಸೈಮ್ ಅಯ್ಯೂಬ್ (39) ಹಾಗೂ ಫಖರ್ ಝಮಾನ್ (45) ಉತ್ತಮ ಆರಂಭ ಒದಗಿಸಿದ್ದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ 55 ರನ್ಗಳ ಕೊಡುಗೆ ನೀಡಿದರು. ಆ ಬಳಿಕ ಬಂದ ಸಲ್ಮಾನ್ ಅಲಿ ಅಘಾ 62 ರನ್ ಬಾರಿಸಿದರು.
ಇದಾಗ್ಯೂ ಪಾಕಿಸ್ತಾನ್ ತಂಡ 257 ರನ್ಗಳಿಗೆ 7 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತು. ಈ ಹಂತದಲ್ಲಿ ಮೊಹಮ್ಮದ್ ನವಾಝ್ 9 ರನ್ಗಳಿಸುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು. ಈ ಮೂಲಕ ಹಾಗೂ ಹೀಗೂ ಮಾಡಿ 49.4 ಓವರ್ಗಳಲ್ಲಿ 264 ರನ್ಗಳಿಸಿ 2 ವಿಕೆಟ್ಗಳ ರೋಚಕ ಜಯ ಸಾಧಿಸಿತು.
