ಪಾಕಿಸ್ತಾನದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಭಯಾನಕ ವಿಡಿಯೋ
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬೃಹತ್ ಬಾಂಬ್ ಸ್ಫೋಟ ಸಂಭವಿಸಿದೆ. ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, 32 ಜನರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿರುವ ಎಫ್‌ಸಿ (ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ) ಪ್ರಧಾನ ಕಚೇರಿಯ ಎದುರು ಬಾಂಬ್ ಸ್ಫೋಟಗೊಂಡಿದೆ. ಪಾಕಿಸ್ತಾನಿ ಮಾಧ್ಯಮ ವರದಿಗಳ ಪ್ರಕಾರ, ಸ್ಫೋಟದ ಸದ್ದು ಎಷ್ಟು ಪ್ರಬಲವಾಗಿತ್ತೆಂದರೆ ಅದು ಮಾಡೆಲ್ ಟೌನ್ ಮತ್ತು ಪಕ್ಕದ ಪ್ರದೇಶಗಳಿಗೂ ಹಬ್ಬಿತ್ತು ಮತ್ತು ಹತ್ತಿರದ ಮನೆಗಳು ಮತ್ತು ಕಟ್ಟಡಗಳ ಕಿಟಕಿಗಳನ್ನು ಪುಡಿಪುಡಿ ಮಾಡಿದೆ.
ಇಸ್ಲಾಮಾಬಾದ್, ಸೆಪ್ಟೆಂಬರ್ 30: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬೃಹತ್ ಬಾಂಬ್ ಸ್ಫೋಟ ಸಂಭವಿಸಿದೆ. ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, 32 ಜನರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿರುವ ಎಫ್‌ಸಿ (ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ) ಪ್ರಧಾನ ಕಚೇರಿಯ ಎದುರು ಬಾಂಬ್ ಸ್ಫೋಟಗೊಂಡಿದೆ. ಪಾಕಿಸ್ತಾನಿ ಮಾಧ್ಯಮ ವರದಿಗಳ ಪ್ರಕಾರ, ಸ್ಫೋಟದ ಸದ್ದು ಎಷ್ಟು ಪ್ರಬಲವಾಗಿತ್ತೆಂದರೆ ಅದು ಮಾಡೆಲ್ ಟೌನ್ ಮತ್ತು ಪಕ್ಕದ ಪ್ರದೇಶಗಳಿಗೂ ಹಬ್ಬಿತ್ತು ಮತ್ತು ಹತ್ತಿರದ ಮನೆಗಳು ಮತ್ತು ಕಟ್ಟಡಗಳ ಕಿಟಕಿಗಳನ್ನು ಪುಡಿಪುಡಿ ಮಾಡಿದೆ.
ಆ ಪ್ರದೇಶದಲ್ಲಿ ಗುಂಡಿನ ಸದ್ದು ಕೂಡ ಕೇಳಿಬಂದಿದ್ದು, ನಿವಾಸಿಗಳಲ್ಲಿ ಭೀತಿ ಮತ್ತು ಭಯ ಹರಡಿದೆ. ರಕ್ಷಣಾ ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ಶೋಧ ಕಾರ್ಯಾಚರಣೆಗಾಗಿ ಪ್ರದೇಶವನ್ನು ಸುತ್ತುವರೆದಿದೆ ಎಂದು ಪಾಕಿಸ್ತಾನದ ಆಜ್ ನ್ಯೂಸ್ ವರದಿ ಮಾಡಿದೆ. ಆ ಸಮಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

