ಪಾಕಿಸ್ತಾನದಲ್ಲೂ ಕೋರ್ಟ್ ಹೊರಗೆ ನಿಲ್ಲಿಸಿದ್ದ ಕಾರು ಸ್ಫೋಟ; 12 ಜನರು ಸಾವು
ಇಸ್ಲಾಮಾಬಾದ್‌ನ ಜಿ -11 ಸೆಕ್ಟರ್‌ನಲ್ಲಿರುವ ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಇಂದು ಕಾರು ಸ್ಫೋಟ ಸಂಭವಿಸಿದೆ. ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, 12 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ನ್ಯಾಯಾಲಯದ ಪ್ರದೇಶದಲ್ಲಿ ಭಾರೀ ಸಂಚಾರ ಮತ್ತು ಜನಸಂದಣಿ ಇದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಹಲವಾರು ವಕೀಲರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ.
ಇಸ್ಲಮಾಬಾದ್, ನವೆಂಬರ್ 11: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಜಿ -11 ಸೆಕ್ಟರ್‌ನಲ್ಲಿರುವ ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಇಂದು ಕಾರು ಸ್ಫೋಟ (Car Blast) ಸಂಭವಿಸಿದೆ. ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, 12 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ನ್ಯಾಯಾಲಯದ ಪ್ರದೇಶದಲ್ಲಿ ಭಾರೀ ಸಂಚಾರ ಮತ್ತು ಜನಸಂದಣಿ ಇದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಹಲವಾರು ವಕೀಲರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ.
ನ್ಯಾಯಾಲಯದ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ. ಸಿಲಿಂಡರ್ ಸ್ಫೋಟದ ನಂತರ ಕಾರು ಬೆಂಕಿಗೆ ಆಹುತಿಯಾಗಿದ್ದು, ಆವರಣದಾದ್ಯಂತ ದಟ್ಟವಾದ ಹೊಗೆ ಹರಡಿತು. ಭಾರತದ ದೆಹಲಿಯಲ್ಲಿ ಕೂಡ ನಿನ್ನೆ ಸಂಜೆ ಕಾರು ಸ್ಫೋಟವಾಗಿದೆ. ಅದರ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಕಾರು ಸ್ಫೋಟವಾಗಿದ್ದು, ಈ ಸ್ಫೋಟದ ಹಿಂದೆಯೂ ಉಗ್ರರ ಕೈವಾಡದ ಶಂಕೆ ವ್ಯಕ್ತವಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ