Video: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಐಇಡಿ ಸ್ಫೋಟ, ಐವರು ಸಾವು
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಮಾರುಕಟ್ಟೆಯಲ್ಲಿ ಸಂಭವಿಸಿದ ಐಇಡಿ ಸ್ಫೋಟದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಖುಜ್ದಾರ್‌ನ ನಾಲ್ ಬಜಾರ್‌ನಲ್ಲಿ ನಿಲ್ಲಿಸಿದ್ದ ಮೋಟಾರ್‌ಬೈಕ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇರಿಸಲಾಗಿತ್ತು. ಸ್ಫೋಟದಲ್ಲಿ ಹಲವಾರು ವಾಹನಗಳು ನಾಶವಾಗಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ ಖುಜ್ದಾರ್ ಜಾವೇದ್ ಜೆಹ್ರಿ) ತಿಳಿಸಿದ್ದಾರೆ.
ಬಲೂಚಿಸ್ತಾನ, ಮಾರ್ಚ್ 06: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಮಾರುಕಟ್ಟೆಯಲ್ಲಿ ಸಂಭವಿಸಿದ ಐಇಡಿ ಸ್ಫೋಟದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಖುಜ್ದಾರ್‌ನ ನಾಲ್ ಬಜಾರ್‌ನಲ್ಲಿ ನಿಲ್ಲಿಸಿದ್ದ ಮೋಟಾರ್‌ಬೈಕ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇರಿಸಲಾಗಿತ್ತು. ಸ್ಫೋಟದಲ್ಲಿ ಹಲವಾರು ವಾಹನಗಳು ನಾಶವಾಗಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ ಖುಜ್ದಾರ್ ಜಾವೇದ್ ಜೆಹ್ರಿ) ತಿಳಿಸಿದ್ದಾರೆ.
ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ತಿಳಿಸಿದರು. ಬಲೂಚಿಸ್ತಾನವು ಎರಡು ದಶಕಗಳಿಗೂ ಹೆಚ್ಚು ಕಾಲ ನಿರಂತರ ಹಿಂಸಾಚಾರ ಮತ್ತು ದಂಗೆಯನ್ನು ಎದುರಿಸುತ್ತಿದೆ. ಜನವರಿ 26 ರಂದು, ಖುಜ್ದಾರ್ ನಿಂದ ರಾವಲ್ಪಿಂಡಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ಬಳಿ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರು ಮತ್ತು ಏಳು ಮಂದಿ ಗಾಯಗೊಂಡಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ