ಭೀಕರ ಸ್ಫೋಟಕ್ಕೆ ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣ ಛಿದ್ರಛಿದ್ರ: ವಿಡಿಯೋ ನೋಡಿ

ಭೀಕರ ಸ್ಫೋಟಕ್ಕೆ ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣ ಛಿದ್ರಛಿದ್ರ: ವಿಡಿಯೋ ನೋಡಿ

Ganapathi Sharma
|

Updated on: Nov 09, 2024 | 1:11 PM

ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾದಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 25 ಜನ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ರೈಲು ನಿಲ್ದಾಣದ ಚಾವಣಿ ಛಿದ್ರಗೊಂಡಿದ್ದು, ಸ್ಥಳದಲ್ಲಿ ಭಯಾನಕ ಸನ್ನಿವೇಶ ಸೃಷ್ಟಿಯಾಗಿದೆ. ಘಟನೆಗೆ ಸಂಬಂಧಿಸಿದ್ದು ಎನ್ನಲಾದ ಸಿಸಿಟಿವಿ ದೃಶ್ಯವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ.

ಇಸ್ಲಾಮಾಬಾದ್, ನವೆಂಬರ್ 9: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಭಾರಿ ಬಾಂಬ್ ಸ್ಫೋಟದ್ದು ಎನ್ನಲಾದ ಸಿಸಿಟಿವ ದೃಶ್ಯಾವಳಿಯೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬಾಂಬ್ ಸ್ಫೋಟ ಸಂಭವಿಸಿದ ಕ್ಷಣ, ಸ್ಫೋಟದ ತೀವ್ರತೆಗೆ ರೈಲು ನಿಲ್ದಾಣ ಛಿದ್ರಗೊಂಡಿರುವ ಸಿಸಿಟಿವಿ ದೃಶ್ಯ ಎಂದು ‘ಸ್ಪುಟ್ನಿಕ್ ಇಂಡಿಯಾ’ ತಾಣ ವಿಡಿಯೋವೊಂದನ್ನು ಪೋಸ್ಟ್ ಮಾಡಿದೆ. ಆ ವಿಡಿಯೋ ಇಲ್ಲಿದೆ.

ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ 25 ಮಂದಿ ಮೃತಪಟ್ಟಿದ್ದು, ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ತೀವ್ರತೆಗೆ ರೈಲು ನಿಲ್ದಾಣದ ಚಾವಣಿ ಛಿದ್ರಗೊಂಡಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ