6,6,6,6,6,6: ಆಸಿಫ್ ಖಾನ್ ಸಿಡಿಲಬ್ಬರಕ್ಕೆ ನಡುಗಿದ ಪಾಕ್ ಬೌಲರ್ಗಳು
United Arab Emirates vs Pakistan: ಕೇವಲ 35 ಎಸೆತಗಳನ್ನು ಎದುರಿಸಿದ ಆಸಿಫ್ ಖಾನ್ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಪಾಕ್ ಬೌಲರ್ಗಳ ಬೆಂಡೆತ್ತಿದರು. ಈ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಆಸಿಫ್ ಯುಎಇ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ 35 ಎಸೆತಗಳಲ್ಲಿ 77 ರನ್ಗಳಿಸಿ ಔಟಾಗುವ ಮೂಲಕ ತನ್ನ ಏಕಾಂಗಿ ಹೋರಾಟವನ್ನು ಅಂತ್ಯಗೊಳಿಸಿದರು.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ 2ನೇ ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಯುಎಇ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕ್ ಪರ ಆರಂಭಿಕ ದಾಂಡಿಗ ಸೈಮ್ ಅಯ್ಯೂಬ್ (69) ಅರ್ಧಶತಕ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹಸನ್ ನವಾಝ್ 56 ರನ್ಗಳಿಸಿದರು. ಈ ಮೂಲಕ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 207 ರನ್ ಕಲೆಹಾಕಿತು.
208 ರನ್ಗಳ ಕಠಿಣ ಗುರಿ ಬೆನ್ನತ್ತಿದ ಯುಎಇ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 76 ರನ್ಗಳಿಸುವಷ್ಟರಲ್ಲಿ ಪ್ರಮುಖ 5 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಆದರೆ ಈ ಹಂತದಲ್ಲಿ ಕಣಕ್ಕಿಳಿದ ಆಸಿಫ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಕೇವಲ 35 ಎಸೆತಗಳನ್ನು ಎದುರಿಸಿದ ಆಸಿಫ್ ಖಾನ್ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಪಾಕ್ ಬೌಲರ್ಗಳ ಬೆಂಡೆತ್ತಿದರು. ಈ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಆಸಿಫ್ ಯುಎಇ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ 35 ಎಸೆತಗಳಲ್ಲಿ 77 ರನ್ಗಳಿಸಿ ಔಟಾಗುವ ಮೂಲಕ ತನ್ನ ಏಕಾಂಗಿ ಹೋರಾಟವನ್ನು ಅಂತ್ಯಗೊಳಿಸಿದರು. ಪರಿಣಾಮ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 31 ರನ್ಗಳ ಜಯ ಸಾಧಿಸಿತು.
