ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್
ICC Champions Trophy 2025: ಫೆಬ್ರವರಿ 19 ರಿಂದ ಶುರುವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಬಾರಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳೆಂದರೆ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ, ಬಾಂಗ್ಲಾದೇಶ್, ಇಂಗ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್ ಮತ್ತು ಸೌತ್ ಆಫ್ರಿಕಾ. ಈ ತಂಡಗಳನ್ನು 2 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ.
ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಆತಿಥೇಯ ಪಾಕಿಸ್ತಾನ್ ತಂಡ ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಲಾಹೋರ್ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ವಿಶೇಷ ಕಾರ್ಯಕ್ರಮದ ಮೂಲಕ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾದ ಪಾಕಿಸ್ತಾನ್ ತಂಡದ ಆಟಗಾರರು ಹಾಜರಿದ್ದರು. ಇನ್ನು ಈ ಕಾರ್ಯಕ್ರಮದೊಂದಿಗೆ ನವೀಕರಣಗೊಂಡಿರುವ ಗದ್ದಾಫಿ ಸ್ಟೇಡಿಯಂ ಕೂಡ ಉದ್ಘಾಟನೆಗೊಂಡಿದೆ. ಈ ಸ್ಟೇಡಿಯಂನಲ್ಲೇ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯ ಬಹುತೇಕ ಪಂದ್ಯಗಳು ನಡೆಯಲಿದೆ.
ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಫೆಬ್ರವರಿ 19 ರಂದು ನಡೆಯಲಿದೆ. ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 23 ರಂದು ದುಬೈನಲ್ಲಿ ಜರುಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಫೆಬ್ರವರಿ 20 ರಂದು ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಹಾಗೆಯೇ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

