ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್

Updated on: Feb 08, 2025 | 8:24 AM

ICC Champions Trophy 2025: ಫೆಬ್ರವರಿ 19 ರಿಂದ ಶುರುವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಬಾರಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳೆಂದರೆ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ, ಬಾಂಗ್ಲಾದೇಶ್, ಇಂಗ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್ ಮತ್ತು ಸೌತ್ ಆಫ್ರಿಕಾ. ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ.

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಆತಿಥೇಯ ಪಾಕಿಸ್ತಾನ್ ತಂಡ ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಲಾಹೋರ್​ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ವಿಶೇಷ ಕಾರ್ಯಕ್ರಮದ ಮೂಲಕ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾದ ಪಾಕಿಸ್ತಾನ್ ತಂಡದ ಆಟಗಾರರು ಹಾಜರಿದ್ದರು. ಇನ್ನು ಈ ಕಾರ್ಯಕ್ರಮದೊಂದಿಗೆ ನವೀಕರಣಗೊಂಡಿರುವ ಗದ್ದಾಫಿ ಸ್ಟೇಡಿಯಂ ಕೂಡ ಉದ್ಘಾಟನೆಗೊಂಡಿದೆ. ಈ ಸ್ಟೇಡಿಯಂನಲ್ಲೇ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯ ಬಹುತೇಕ ಪಂದ್ಯಗಳು ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಫೆಬ್ರವರಿ 19 ರಂದು ನಡೆಯಲಿದೆ. ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 23 ರಂದು ದುಬೈನಲ್ಲಿ ಜರುಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಫೆಬ್ರವರಿ 20 ರಂದು ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಹಾಗೆಯೇ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಪಾಕಿಸ್ತಾನ್ ತಂಡ: ಬಾಬರ್ ಆಝಂ, ಫಖರ್ ಝಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ (ಉಪನಾಯಕ), ಮೊಹಮ್ಮದ್ ರಿಝ್ವಾನ್ (ನಾಯಕ), ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.