AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs SA: ಸತತ 2ನೇ ಪಂದ್ಯದಲ್ಲೂ ಮುಗ್ಗರಿಸಿದ ಬಾಬರ್ ಆಝಂ

PAK vs SA: ಸತತ 2ನೇ ಪಂದ್ಯದಲ್ಲೂ ಮುಗ್ಗರಿಸಿದ ಬಾಬರ್ ಆಝಂ

ಪೃಥ್ವಿಶಂಕರ
|

Updated on: Oct 20, 2025 | 5:57 PM

Share

Babar Azam's Test Century Drought Continues: ರಾವಲ್ಪಿಂಡಿ ಟೆಸ್ಟ್‌ನಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಝಂ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೇವಲ 16 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮೊದಲ ಟೆಸ್ಟ್‌ನಲ್ಲೂ ವಿಫಲರಾಗಿದ್ದ ಬಾಬರ್, ಕಳೆದ 75 ಇನ್ನಿಂಗ್ಸ್‌ಗಳಿಂದ ಶತಕ ಗಳಿಸಿಲ್ಲ. ಅವರ ಕಳಪೆ ಫಾರ್ಮ್ ತಂಡಕ್ಕೆ ಮತ್ತು ಅಭಿಮಾನಿಗಳಲ್ಲಿ ಬೇಸರ ತರಿಸಿದೆ, ದೊಡ್ಡ ಇನ್ನಿಂಗ್ಸ್ ನಿರೀಕ್ಷೆ ಹುಸಿಯಾಗಿದೆ.

ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, ಅನುಭವಿ ಬ್ಯಾಟ್ಸ್‌ಮನ್ ಬಾಬರ್ ಆಝಂ ಅವರಿಂದ ದೊಡ್ಡ ಇನ್ನಿಂಗ್ಸ್​ನ ನಿರೀಕ್ಷೆ ಇತ್ತು. ಆದರೆ ಬಾಬರ್ ಈ ಪಂದ್ಯದಲ್ಲೂ ಬಹುಬೇಗನೇ ಔಟಾದರು. ಬಹಳ ದಿನಗಳ ನಂತರ ಪಾಕ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಬರ್​ಗೆ ಮೊದಲ ಟೆಸ್ಟ್​ನಲ್ಲೂ ಮಿಂಚಲು ಸಾಧ್ಯವಾಗಿರಲಿಲ್ಲ. ಇದೀಗ ಎರಡನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲೂ ಕೇವಲ 16 ರನ್​ಗೆ ವಿಕೆಟ್ ಒಪ್ಪಿಸಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ತಾನ ಉತ್ತಮ ಆರಂಭ ಪಡೆಯಿತು. ಬಾಬರ್ ಕ್ರೀಸ್‌ಗೆ ಬಂದಾಗ, ಪಾಕಿಸ್ತಾನ 2 ವಿಕೆಟ್‌ಗಳ ನಷ್ಟಕ್ಕೆ 146 ರನ್ ಗಳಿಸಿತ್ತು. ಬಾಬರ್ ಕೂಡ ಮೂರು ಅದ್ಭುತ ಬೌಂಡರಿಗಳನ್ನು ಬಾರಿಸಿ ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾದರು. ಆದಾಗ್ಯೂ, ಎಡಗೈ ಸ್ಪಿನ್ನರ್ ಕೇಶವ್ ಮಹಾರಾಜ್ ಅವರ ಬೌಲಿಂಗ್​ನಲ್ಲಿ ಬಾಬರ್ ಕ್ಯಾಚಿತ್ತು ಔಟಾದರು. ಬಾಬರ್ ತಮ್ಮ ಇನ್ನಿಂಗ್ಸ್​ನಲ್ಲಿ 22 ಎಸೆತಗಳನ್ನು ಎದುರಿಸಿ 16 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದು ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳನ್ನು ನಿರಾಶೆಗೊಳಿಸಿತು. ವಾಸ್ತವವಾಗಿ, ಬಾಬರ್ ಬಹಳ ಸಮಯದಿಂದ ದೊಡ್ಡ ಇನ್ನಿಂಗ್ಸ್ ಆಡಿಲ್ಲ. ಅವರು 75 ಇನ್ನಿಂಗ್ಸ್‌ಗಳಲ್ಲಿ ಟೆಸ್ಟ್ ಶತಕ ಗಳಿಸಿಲ್ಲ.

ಬಾಬರ್ ಸರಣಿಯ ಮೊದಲ ಪಂದ್ಯದಲ್ಲೂ ನಿರಾಶೆಗೊಳಿಸಿದ್ದರು. ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 23 ರನ್‌ಗಳಿಸಿ ಔಟಾಗಿದ್ದ ಬಾಬರ್, ಎರಡನೇ ಇನ್ನಿಂಗ್ಸ್‌ನಲ್ಲಿ 72 ಎಸೆತಗಳನ್ನು ಎದುರಿಸಿ 42 ರನ್ ಗಳಿಸಿದರು. ಆದರೆ ಈ ಆರಂಭವನ್ನು ದೊಡ್ಡ ಸ್ಕೋರ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ