ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ

ಇಂದು ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಆಚರಣೆ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಬಡಾಮಖಾನ್ ಬಳಿಯಿಂದ ಈದ್ ಮಿಲಾದ್ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿರುವಂತಹ ಘಟನೆ ನಡೆದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 16, 2024 | 5:27 PM

ಚಿತ್ರದುರ್ಗ, ಸೆಪ್ಟೆಂಬರ್​​ 16: ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಪ್ಯಾಲೆಸ್ತೀನ್​ ಪರ ಘೋಷಣೆ ಕೂಗಿರುವಂತಹ ಘಟನೆ ನಗರದ ಗಾಂಧಿ ವೃತ್ತದ ಬಳಿ ನಡೆದಿದೆ. ಮೆರವಣಿಗೆಯಲ್ಲಿ ಕೆಲವರಿಂದ ಪ್ಯಾಲೆಸ್ತೀನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಈ ವೇಳೆ ಎಚ್ಚರಿಕೆ ನೀಡಿದ ಪೊಲೀಸರು ಎರಡು ಧ್ವಜ ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಮುಂಜಾಗೃತೆ ಕ್ರಮವಾಗಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us