ವಿಜ್ಞಾನಿಗಳಿಂದಲೂ ಮೆಚ್ಚುಗೆ ಪಡೆದ ‘ದಿ ವ್ಯಾಕ್ಸಿನ್​ ವಾರ್​’; ಖುಷಿ ಹಂಚಿಕೊಂಡ ಪಲ್ಲವಿ ಜೋಶಿ

Updated on: Sep 21, 2023 | 7:40 PM

ಟ್ರೇಲರ್​ ಬಿಡಗಡೆಗೂ ಮುನ್ನವೇ ವಿದೇಶದ ಅನೇಕ ನಗರಗಳಲ್ಲಿ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರವನ್ನು ಪ್ರದರ್ಶಿಸಲಾಗಿದೆ. ವಿಜ್ಞಾನಿಗಳೂ ಸೇರಿದಂತೆ ಅನೇಕ ಕ್ಷೇತ್ರಗಳ ಜನರು ಈ ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಆ ಬಗ್ಗೆ ನಟಿ, ನಿರ್ಮಾಪಕಿ ಪಲ್ಲವಿ ಜೋಶಿ ಅವರು ಮಾತನಾಡಿದ್ದಾರೆ.

ಬಹುನಿರೀಕ್ಷಿತ ‘ದಿ ವ್ಯಾಕ್ಸಿನ್​ ವಾರ್​’ (The Vaccine War) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 28ರಂದು ಈ ಚಿತ್ರ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರ ಪತ್ನಿ ಪಲ್ಲವಿ ಜೋಶಿ ಕೂಡ ಒಂದು ಪಾತ್ರ ಮಾಡಿದ್ದಾರೆ. ಅನೇಕ ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಪಲ್ಲವಿ ಜೋಶಿ ಅವರು ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಈಗಾಗಲೇ ಹಲವು ದೇಶಗಳಲ್ಲಿ ಪ್ರದರ್ಶನ ಕಂಡಿದೆ. ಅಲ್ಲಿ ಸಿಕ್ಕಂತಹ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಪಲ್ಲವಿ ಜೋಶಿ (Pallavi Joshi) ವಿವರಿಸಿದ್ದಾರೆ. ಸಿನಿಮಾ ನೋಡಿದ ವಿಜ್ಞಾನಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಅದು ಪಲ್ಲವಿ ಜೋಶಿಗೆ ಖುಷಿ ನೀಡಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದಲ್ಲೂ ಪಲ್ಲವಿ ಅವರು ಒಂದು ಮುಖ್ಯ ಪಾತ್ರ ಮಾಡಿದ್ದರು. ಆ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ ಅವರು ನಿರ್ಮಾಪಕಿ ಕೂಡ ಹೌದು. ಈ ಚಿತ್ರದ ಹಿಂದಿನ ಅನೇಕ ಸಂಗತಿಗಳನ್ನು ಅವರು ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More