AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರೀ ಮಳೆ: ಪಣತ್ತೂರು ಅಂಡರ್ ಪಾಸ್​ನಲ್ಲಿ ತೇಲಾಡಿದ ಕಾರು

ಬೆಂಗಳೂರಿನಲ್ಲಿ ಭಾರೀ ಮಳೆ: ಪಣತ್ತೂರು ಅಂಡರ್ ಪಾಸ್​ನಲ್ಲಿ ತೇಲಾಡಿದ ಕಾರು

ಅರುಣ್ ಕುಮಾರ್​ ಆರ್​.
| Edited By: |

Updated on: Oct 16, 2026 | 8:38 PM

Share

ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಇದರಿಮದ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯ್ತು. ಇನ್ನು ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪಣತ್ತೂರು ರೈಲ್ವೆ ಅಂಡರ್‌ಪಾಸ್ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಅದೃಷ್ಟವಶಾತ್ ಜಲಾವೃತಗೊಂಡಿರುವ ಅಂಡರ್ ಪಾಸ್​ನಲ್ಲಿ ಸಿಲುಕಿದ ದ್ವಿಚಕ್ರ ವಾಹನ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು, ಅಕ್ಟೋಬರ್ 16: ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಇದರಿಮದ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯ್ತು. ಇನ್ನು ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪಣತ್ತೂರು ರೈಲ್ವೆ ಅಂಡರ್‌ಪಾಸ್ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಅದೃಷ್ಟವಶಾತ್ ಜಲಾವೃತಗೊಂಡಿರುವ ಅಂಡರ್ ಪಾಸ್​ನಲ್ಲಿ ಸಿಲುಕಿದ ದ್ವಿಚಕ್ರ ವಾಹನ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಇನ್ನು ಕಾರೊಂದು ನೀರಿನಲ್ಲಿ ತೇಲಾಡಿದ ಆತಂಕಕಾರಿ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಕಾರು ಮುಳುಗುತ್ತಿದ್ದಂತೆಯೇ ಚಾಲಕ ಆಚೆ ಓಡೋಡಿ ಬಂದಿದ್ದಾನೆ.

ರಸ್ತೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ಸಮರ್ಪಕ ವ್ಯವಸ್ಥೆ ಇಲ್ಲದಿರುವುದೇ ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಅಂಡರ್‌ಪಾಸ್‌ನಿಂದ ನೀರು ಸರಾಗವಾಗಿ ಹೊರಹೋಗಲು ಈ ಹಿಂದೆ ಸಣ್ಣ ಚರಂಡಿ ಹಾಗೂ ಪೈಪ್‌ಲೈನ್ ಅಳವಡಿಕೆ ಮಾಡಲಾಗಿತ್ತು. ಆದರೆ, ಇತ್ತೀಚೆಗೆ ಕಾಮಗಾರಿ ನೆಪದಲ್ಲಿ ಅದೇ ಪೈಪ್‌ಲೈನ್‌ಗಳ ಮೇಲೆ ರಾಶಿಗಟ್ಟಲೆ ಮಣ್ಣನ್ನು ಸುರಿದು ಮುಚ್ಚಲಾಗಿದೆ. ಮಣ್ಣಿನ ರಾಶಿ ಬಿದ್ದ ಪರಿಣಾಮ ನೀರು ಹರಿದು ಹೋಗುವ ದಾರಿ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ಮಳೆ ಸುರಿದ ಕೆಲವೇ ಕ್ಷಣಗಳಲ್ಲಿ ನೀರು ಹೊರಹೋಗಲಾಗದೆ ಅಂಡರ್‌ಪಾಸ್ ಒಳಗೆ ನಿಂತು ಅವಾಂತರ ಸೃಷ್ಟಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More