ತೀವ್ರಗೊಂಡ ಪಂಚಮಸಾಲಿ ಮೀಸಲಾತಿ ಹೋರಾಟ, ಲಾಠಿಚಾರ್ಜ್ ಹಿನ್ನೆಲೆ ಸಿದ್ದರಾಮಯ್ಯ ಕ್ಷಮೆ ಕೇಳಲು ಆಗ್ರಹ

ತೀವ್ರಗೊಂಡ ಪಂಚಮಸಾಲಿ ಮೀಸಲಾತಿ ಹೋರಾಟ, ಲಾಠಿಚಾರ್ಜ್ ಹಿನ್ನೆಲೆ ಸಿದ್ದರಾಮಯ್ಯ ಕ್ಷಮೆ ಕೇಳಲು ಆಗ್ರಹ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 12, 2024 | 1:09 PM

ಬಸವ ಜಯ ಮೃತ್ಯುಂಜಯ ಸ್ವಾಮೀಜಿಯರು ಸಹ ಪ್ರತಿಭಟನೆಕಾರನ್ನು ಜೊತೆಗೂಡಿದಾಗ ನಮ್ಮ ಬೆಳಗಾವಿ ಪ್ರತಿನಿಧಿ ಅವರೊಂದಿಗೆ ಮಾತಾಡಿದರು. ಇವತ್ತು ರಾಜ್ಯದ ಎಲ್ಲ ಜಿಲ್ಲಾಕೇಂದ್ರ, ತಾಲೂಕು, ಹೋಬಳಿ ಮತ್ತು ಹಳ್ಳಿಗಳಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ಮಾಡಿ ರಸ್ತೆಗಳನ್ನು ಬಂದ್ ಮಾಡುತ್ತಿದ್ದಾರೆ, ಸುಮಾರು 10 ಲಕ್ಷ ಜನ ಭಾಗಿಯಾಗಿದ್ದಾರೆ, ನಮ್ಮದು ಶಾಂತಿಯುತವಾದ ಪ್ರತಿಭಟನೆ ಎಂದು ಹೇಳಿದರು.

ಬೆಳಗಾವಿ: ಮಂಗಳವಾರದಂದು ಪಂಚಮಸಾಲಿ ಪ್ರತಿಭಟನೆಕಾರರ ಮೇಲೆ ನಡೆದ ಲಾಠಿ ಚಾರ್ಜ್ ಹಿನ್ನೆಲೆಯಲ್ಲಿ ಸಮುದಾಯದವರು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನ ನಡೆಯುತ್ತಿರುವ ಬೆಳಗಾವಿಯಲ್ಲಿ ಅವರು ರಾಷ್ಟ್ರೀಯ ಹೆದ್ದಾರಿಯ ನಡುವೆ ಕೂತು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಕಾರರ ಪ್ರಮುಖ ಬೇಡಿಕೆಗಳೆಂದರೆ, ಲಾಠಿಚಾರ್ಜ್​ಗೆ ಕಾರಣವಾದ ಪೊಲೀಸ್ ಅಧಿಕಾರಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು, ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚಮಸಾಲಿ ಲಿಂಗಾಯುತರ ಕ್ಷಮೆ ಕೇಳಬೇಕು ಮತ್ತು ಪಂಚಮಸಾಲಿ ಮೀಸಲಾತಿಯ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಡಿಸಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪಂಚಮಸಾಲಿ ಹೋರಾಟ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್: ಆದೇಶ ಪಾಲನೆ ಸರಿಯಾದ ಕ್ರಮವೆಂದ ಸಿಎಂ ಸಿದ್ದರಾಮಯ್ಯ