ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ: ಭಕ್ತರ ನಡುವೆಯೇ ಫೈಟ್​​!

Edited By:

Updated on: Apr 27, 2026 | 5:29 PM

ಪಂಚಮಸಾಲಿ ಪೀಠದ ಆವರಣದಲ್ಲಿ ಟ್ರಸ್ಟ್‌ನ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ ನಡೆದಿದೆ. ಪ್ರಧಾನ ಧರ್ಮಧರ್ಶಿ ಬಿಸಿ ಉಮಾಪತಿ ಲೆಕ್ಕ ಮಂಡಿಸುತ್ತಿದ್ದಾಗ ಸ್ವಾಮೀಜಿ ಬೆಂಬಲಿಗರಿಗೆ ಟ್ರಸ್ಟಿನ ಬೆಂಬಲಿಗರು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವೇಳೆ ಸ್ವಾಮೀಜಿ ಬೆಂಬಲಿಗರು ಟ್ರಸ್ಟ್​​​ನ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಖಾಕಿ ಪರಿಸ್ಥಿತಿ ತಿಳಿಗೊಳಿಸಿದೆ.

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್‌ನ ಆಡಳಿತಕ್ಕೆ ಸಂಬಂಧಿಸಿದಂತೆ ಭಿನ್ನಮತ ಭುಗಿಲೆದ್ದಿದೆ.  ಸ್ವಾಮೀಜಿ ಹಾಗೂ ಟ್ರಸ್ಟ್‌ನ ಬೆಂಬಲಿಗರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಟ್ರಸ್ಟ್​​ನ ಪ್ರಧಾನ ಧರ್ಮಧರ್ಶಿ ಬಿ.ಸಿ. ಉಮಾಪತಿ ಲೆಕ್ಕ ಮಂಡನೆ ಸಂದರ್ಭ ಸ್ವಾಮೀಜಿ ಬೆಂಬಲಿಗರಿಗೆ ಟ್ರಸ್ಟಿನ ಬೆಂಬಲಿಗರು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವೇಳೆ ಸ್ವಾಮೀಜಿ ಬೆಂಬಲಿಗರು ಟ್ರಸ್ಟ್​​​ನ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಲೆಕ್ಕ ಕೇಳೋರು ಇಷ್ಟು ದಿನ ಎಲ್ಲಿ ಹೋಗಿದ್ರಿ ಎಂದು ಟ್ರಸ್ಟ್​​ನ ಬೆಂಬಲಿಗ ಕೇಳಿದ್ದಕ್ಕೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಈ ವೇಳೆ ಮಧ್ಯೆ ಪ್ರವೇಶ ಮಾಡಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 27, 2026 05:28 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More