ಗದಗದಲ್ಲಿ ಪಂಚಮಸಾಲಿ ಹೋರಾಟ: ಟಯರ್​ಗೆ ಬೆಂಕಿ ಹಚ್ಚುವ ವೇಳೆ ಕಾಲಿಗೆ ಹೊತ್ತಿದ ಬೆಂಕಿ, ಹೈಡ್ರಾಮಾ

| Updated By: Ganapathi Sharma

Updated on: Dec 12, 2024 | 12:34 PM

2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಮುಖಂಡರ ಹೋರಾಟ ತೀವ್ರಗೊಂಡಿದೆ. ಬೆಳಗಾವಿ ಲಾಠಿಚಾರ್ಜ್ ಖಂಡಿಸಿ ಗದಗದಲ್ಲಿ ನಡೆದ ಪ್ರತಿಭಟನೆ ವೇಳೆ ಹೈಡ್ರಾಮಾ ನಡೆದಿದೆ. ಟಯರ್​​ಗೆ ಬೆಂಕಿ ಹಚ್ಚುವ ವೇಳೆ ಪ್ರತಿಭಟನಾಕಾರರೊಬ್ಬರ ಕಾಲಿಗೆ ಬೆಂಕಿ ಹೊತ್ತಿಕೊಂಡ ಘಟನೆಯೂ ನಡೆಯಿತು. ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕುನುಗ್ಗಲು, ತಳ್ಳಾಟ ನಡೆಯಿತು.

ಗದಗ, ಡಿಸೆಂಬರ್ 12: ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟದ ವೇಳೆ ಬೆಳಗಾವಿಯಲ್ಲಿ ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸಿ ಗುರುವಾರ ಗದಗದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ, ಪ್ರತಿಭಟನಾಕಾರರು ಟಯರ್​ಗೆ ಬೆಂಕಿ ಹಚ್ಚುವಾಗ ಕಾಲಿಗೆ ಬೆಂಕಿ ತಗುಲಿದ ಘಟನೆಯೂ ಸಂಭವಿಸಿತು.

ಪ್ರತಿಭಟನಾಕಾರರು ಗದಗ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸರ್ಕಲ್ ಬಂದ್ ಮಾಡಿ‌ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಟಯರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಲು ಮುಖಂಡರು ಮುಂದಾದರು. ಆಗ, ಟಯರ್​ಗೆ ಹೊತ್ತಿದ್ದ ಬೆಂಕಿ ಆರಿಸಲು ಪೊಲೀಸರು ಮುಂದಾಗಿದ್ದಾರೆ. ಪೊಲೀಸರು ಬೆಂಕಿ ಆರಿಸಲು ಮುಂದಾಗುತ್ತಿದ್ದಂತೆ ಪಂಚಮಸಾಲಿ ಮುಖಂಡರು ಅಡ್ಡಿಪಡಿಸಿದ್ದಾರೆ. ಪೊಲೀಸರ ಜೊತೆಗೆ ವಾಗ್ವಾದ, ತಳ್ಳಾಟ ನಡೆಸಿದ್ದಾರೆ. ಟಯರ್ ದೂಡುವ ವೇಳೆ ಕಾಲಿಗೆ ಬೆಂಕಿಹೊತ್ತಿ ಕೆಲ ಕಾಲ ಪರದಾಟಪಡುವಂತಾಯಿತು. ಸ್ಥಳದಲ್ಲಿ ಕೆಲ ಕಾಲ ಹೈಡ್ರಾಮಾ ನಡೆಯಿತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ