ವಚನಾನಂದ ಶ್ರೀ ವಿರುದ್ಧ ಮತ್ತೊಂದು ಸ್ಫೋಟಕ ಆರೋಪ: ರಾಜಕೀಯ ನಾಯಕರ ಕರೆ ರೆಕಾರ್ಡ್​​ ಮಾಡ್ತಿದ್ರಾ ಶ್ವಾಸಗುರು?

Edited By:

Updated on: Apr 16, 2026 | 2:00 PM

ಪಂಚಮಸಾಲಿ ಟ್ರಸ್ಟ್ ಸದಸ್ಯ ಎಚ್.ಎಸ್. ನಾಗರಾಜ್ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ, ಶ್ರೀಗಳು ಹಿರಿಯ ರಾಜಕೀಯ ನಾಯಕರ ದೂರವಾಣಿ ಕರೆಗಳನ್ನು ದಾಖಲಿಸಿಕೊಳ್ಳುತ್ತಿದ್ದು, ಇದು ಅಪಾಯಕಾರಿ ಎಂದು ನಾಗರಾಜ್ ಆರೋಪಿಸಿದ್ದಾರೆ. ನಾಯಕರು ಶ್ರೀಗಳೊಂದಿಗೆ ಫೋನ್‌ನಲ್ಲಿ ಮಾತನಾಡದಂತೆ ಅವರು ಮನವಿ ಮಾಡಿದ್ದಾರೆ. ಅಲ್ಲದೆ ಇಂತಹ ನಡೆ ರಾಜ್ಯದಲ್ಲಿ ಚುಕ್ಕಾಣಿ ಹಿಡಿದಿರುವ ನಾಯಕರಿಗೆ ತೀವ್ರ ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ.

ದಾವಣಗೆರೆ, ಏಪ್ರಿಲ್​​ 16: ಪಂಚಮಸಾಲಿ ಸಮಾಜ ಟ್ರಸ್ಟ್‌ನ ಸದಸ್ಯ ಎಚ್.ಎಸ್. ನಾಗರಾಜ್ ಅವರು ವಚನಾನಂದ ಶ್ರೀಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಚನಾನಂದ ಶ್ರೀಗಳು ರಾಜ್ಯದ ಹಿರಿಯ ಮತ್ತು ಪ್ರಮುಖ ರಾಜಕೀಯ ನಾಯಕರೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದಾರೆ. ಈ ರೆಕಾರ್ಡಿಂಗ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಅಭ್ಯಾಸ ಹೊಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಇಂತಹ ನಡೆ ರಾಜ್ಯದಲ್ಲಿ ಚುಕ್ಕಾಣಿ ಹಿಡಿದಿರುವ ನಾಯಕರಿಗೆ ತೀವ್ರ ಅಪಾಯಕಾರಿ ಎಂದು ನಾಗರಾಜ್ ಎಚ್ಚರಿಸಿದದ್ದು, ಯಾವುದೇ ನಾಯಕರು ಶ್ರೀಗಳೊಂದಿಗೆ ಫೋನ್‌ನಲ್ಲಿ ಮಾತನಾಡದಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Apr 16, 2026 01:59 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More