ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ

Edited By:

Updated on: Feb 27, 2025 | 8:20 PM

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಮತ್ತು ಪುತ್ರ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ತಾಯಿಯ ಹೆಸರಿನ ಆಸ್ತಿಯನ್ನು ಪುತ್ರನ ಹೆಸರಿಗೆ ಮಾಡಿಸಿಕೊಡುವಂತೆ ಅರ್ಜಿ ಹಾಕಿದ್ದರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳ, ಫೆಬ್ರವರಿ 27: ಮಹಿಳಾ ಪಿಡಿಒಗೆ (PDO) ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಪುತ್ರ ಚಪ್ಪಲಿಯಿಂದ ಹೊಡೆದಿರುವಂತಹ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಡೆದಿದೆ. ಪಿಡಿಒ ರತ್ನಮ್ಮ ಗುಂಡಣ್ಣನವರ್‌ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ ಬಂಡಿವಂಡರ, ಪುತ್ರ ಭೀಮೇಶ್‌ನಿಂದ ಹಲ್ಲೆ ಮಾಡಲಾಗಿದೆ. ತಾಯಿ ಹೆಸರಿನಲ್ಲಿದ್ದ ಆಸ್ತಿ ಪುತ್ರನ ಹೆಸರಿಗೆ ಮಾಡುವಂತೆ ಅರ್ಜಿ ಹಾಕಿದ್ರು. ಅದರಂತೆ ಪಿಡಿಒ ರತ್ನಮ್ಮ ಮಾಡಿಕೊಟ್ಟಿದ್ದರು. ತಮಗೆ ತಿಳಿಸದಂತೆ ಕೆಲಸ ಮಾಡಿಕೊಟ್ಟಿದ್ದೀರೆಂದು ಹಲ್ಲೆ ಮಾಡಲಾಗಿದೆ. ಯಲಬುರ್ಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.