AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗೆ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರ ಹೆಲಿಕಾಪ್ಟರ್​ನಿಂದ ಕೆಮೆರಾದಲ್ಲಿ ಸೆರೆಹಿಡಿದ ವಿಹಂಗಮ ದೃಶ್ಯಗಳು ಅತ್ಯಮೋಘ!

ಅಯೋಧ್ಯೆಗೆ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರ ಹೆಲಿಕಾಪ್ಟರ್​ನಿಂದ ಕೆಮೆರಾದಲ್ಲಿ ಸೆರೆಹಿಡಿದ ವಿಹಂಗಮ ದೃಶ್ಯಗಳು ಅತ್ಯಮೋಘ!

ಅರುಣ್​ ಕುಮಾರ್​ ಬೆಳ್ಳಿ
|

Updated on:Jan 22, 2024 | 1:35 PM

Share

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಚಿತ್ರನಟ ಅಮಿತಾಬ್ ಬಚ್ಚನ್ ಸೇರಿದಂತೆ ಹಲವಾರು ವಿಐಪಿಗಳು ಪ್ರಾಣ ಪ್ರತಿಷ್ಠೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಅಯೋಧ್ಯೆಗೆ ಆಗಮಿಸಿದ್ದಾರೆ.

ಅಯೋಧ್ಯೆ: ರಾಮಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅಯೋಧ್ಯೆಗೆ (Ayodhya) ಆಗಮಿಸಿದ್ದಾರೆ. ಪ್ರಧಾನಿ ಮೋದಿಯವರ ಹೆಲಿಕಾಪ್ಟರ್‌ನಿಂದ (helicopter) ಅಯೋಧ್ಯೆಯ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಅಯೋಧ್ಯೆಯ ಭವ್ಯ ದೃಶ್ಯವನ್ನು ನೋಡಬಹುದು. ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ಮೋದಿ ಮಂದಿರದ ಸಂಕೀರ್ಣವನ್ನು ತಲುಪಲಿದ್ದು ಸ್ವಲ್ಪಹೊತ್ತಿನ ಬಳಿಕ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯ ವಿಧಿವಿಧಾನ ಮತ್ತು ಪೂಜಾಕೈಂಕರ್ಯಗಳು ಆರಂಭವಾಗಲಿವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಚಿತ್ರನಟ ಅಮಿತಾಬ್ ಬಚ್ಚನ್ ಸೇರಿದಂತೆ ಹಲವಾರು ವಿಐಪಿಗಳು ಪ್ರಾಣ ಪ್ರತಿಷ್ಠೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಡಿಯೋವನ್ನು ವೀಕ್ಷಿಸಿ……

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 22, 2024 12:47 PM