CWG 2026: ಬೆಂಗಳೂರಿಗೆ ಆಗಮಿಸಿದ ಕಂಚಿನ ಪದಕ ವಿಜೇತೆ ಶಿಲ್ಪಾಗೆ ಅದ್ಧೂರಿ ಸ್ವಾಗತ

Updated on: Aug 06, 2026 | 5:02 PM

2026 Commonwealth Games: 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ 39 ಪದಕಗಳೊಂದಿಗೆ 4ನೇ ಸ್ಥಾನ ಗಳಿಸಿತು. ಕರ್ನಾಟಕದ ಪ್ಯಾರಾ ಅಥ್ಲೀಟ್ ಶಿಲ್ಪಾ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಕಂಚು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ತವರಿಗೆ ಮರಳಿದ ಶಿಲ್ಪಾಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡೋಲು-ಕುಣಿತ, ಹೂವಿನ ಸುರಿಮಳೆಯೊಂದಿಗೆ ಅದ್ಧೂರಿ ಸ್ವಾಗತ ದೊರಕಿತು. ನೂರಾರು ಅಭಿಮಾನಿಗಳು ಅವರನ್ನು ಸಂಭ್ರಮದಿಂದ ಬರಮಾಡಿಕೊಂಡರು.

2026 ರ ಕಾಮನ್‌ವೆಲ್ತ್ ಈ ಕ್ರೀಡಾಕೂಟದಲ್ಲಿ ಭಾರತ ಒಟ್ಟು 39 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿತು. ದೇಶದ ಕ್ರೀಡಾಪಟುಗಳು ಒಟ್ಟು 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳನ್ನು ಗೆದ್ದರು. ಈ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಪ್ಯಾರಾ ಅಥ್ಲೀಟ್ ಶಿಲ್ಪಾ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದರು. ಇದೀಗ ತವರಿಗೆ ಮರಳಿದ ಶಿಲ್ಪಾ ಅವರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.

ವಿಮಾನ ನಿಲ್ದಾಣದಲ್ಲಿ ಡೋಲು-ಕುಣಿತ ಹೂವಿನ ಸುರಿಮಳೆ ಸುರಿಸಿ ಜಯಘೋಷದ ನಡುವೆ ಶಿಲ್ಪಾ ಅವರನ್ನು ಸ್ವಾಗತಿಸಲಾಯಿತು. ಶಿಲ್ಪಾರನ್ನು ಸ್ವಾಗತಿಸಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅವರೆಲ್ಲರೂ ಶಿಲ್ವಾ ಅವರಿಗೆ ಹೂಗುಚ್ಛ ನೀಡಿ ಅದ್ದೂರಿ ಸ್ವಾಗತ ನೀಡಿದರು. ಹಾಗೆಯೇ ಶಿಲ್ಪಾ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

Loading...
Unable to load recommendations.
Follow Us