Video: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್

Updated on: Jul 28, 2026 | 11:51 AM

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ವನಿತಾ ಪ್ಯಾರಾ ಅಥ್ಲೀಟ್‌ಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಗುಂಡು ಎಸೆತದಲ್ಲಿ ಶರ್ಮಿಳಾ ಚಿನ್ನದ ಪದಕ ಗೆದ್ದರೆ, ಕೆ.ಆರ್. ನಗರದ ಕೆ. ಶಿಲ್ಪಾ ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ. ಬಡತನ ಹಾಗೂ ವೈಯಕ್ತಿಕ ಸವಾಲುಗಳನ್ನು ಮೆಟ್ಟಿ ನಿಂತು ಈ ಕನ್ನಡತಿಯರು ದೇಶಕ್ಕೆ ಕೀರ್ತಿ ತಂದಿದ್ದು, ಅವರ ಪರಿಶ್ರಮ, ಛಲಕ್ಕೆ ಸರಿಸಾಟಿಯಿಲ್ಲ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ವನಿತಾ ಪ್ಯಾರಾ ಅಥ್ಲೀಟ್‌ಗಳು ಅತ್ಯದ್ಭುತ ಸಾಧನೆ ಮಾಡಿದ್ದಾರೆ. ಗುಂಡು ಎಸೆತ ಸ್ಪರ್ಧೆಯಲ್ಲಿ ಇಬ್ಬರು ಕ್ರೀಡಾಪಟುಗಳು ಪದಕಗಳನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಪ್ಯಾರಾ ಶಾಟ್‌ಪುಟ್ F57 ಸ್ಪರ್ಧೆಯಲ್ಲಿ ಶರ್ಮಿಳಾ ಚಿನ್ನದ ಪದಕವನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

ಇದೇ ಸ್ಪರ್ಧೆಯಲ್ಲಿ ಕನ್ನಡತಿ ಕೆ. ಶಿಲ್ಪಾ ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ. ಅವರು 7.26 ಮೀಟರ್ ಗುಂಡು ಎಸೆದು ಪದಕ ಗೆದ್ದಿದ್ದಾರೆ. ಕೆ.ಆರ್. ನಗರದ ಕಂಚುಗಾರನಕೊಪ್ಪಲು ಎಂಬ ಪುಟ್ಟ ಗ್ರಾಮದಿಂದ ಬಂದಿರುವ ಶಿಲ್ಪಾ, ನಾಲ್ಕನೇ ವಯಸ್ಸಿನಲ್ಲಿ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು. ಬಡ ರೈತ ಕುಟುಂಬದ ಹಿನ್ನೆಲೆಯ ಹೊರತಾಗಿಯೂ, ಅವರು ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು ಈ ಸಾಧನೆ ಮಾಡಿದ್ದಾರೆ. ಅವರ ಈ ವಿಜಯವು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ಈ ಇಬ್ಬರು ಪ್ಯಾರಾ ಅಥ್ಲೀಟ್‌ಗಳ ಸಾಧನೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹದ್ದಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More