ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ರಾಜಾತಿಥ್ಯ: ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಫೋನ್‌ಗಳು, ಸಿಮ್‌ಗಳು, ಅಡುಗೆ ಸಾಮಗ್ರಿಗಳು, ಮತ್ತು ಇತರೆ ಐಷಾರಾಮಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿಂದೆಯೂ ಇಂತಹ ಆರೋಪಗಳು ಕೇಳಿಬಂದಿದ್ದರೂ ಜೈಲಿನ ಪರಿಸ್ಥಿತಿ ಸುಧಾರಿಸಿಲ್ಲ ಎಂಬುದು ಈ ಕಾರ್ಯಾಚರಣೆಯಿಂದ ಸ್ಪಷ್ಟವಾಗಿದೆ.
ಬೆಂಗಳೂರು, ಫೆಬ್ರವರಿ 23: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿರುವ ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವ ಸಂಗತಿ ಮತ್ತೆ ಬಯಲಾಗಿದೆ. ಈ ಹಿಂದೆ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿದೆ ಎಂಬ ಆರೋಪಗಳನ್ನು ಎದುರಿಸಿದ್ದ ಕಾರಾಗೃಹದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದನ್ನುಈ ಕಾರ್ಯಾಚರಣೆ ದೃಢಪಡಿಸಿದೆ. ಕೈದಿಗಳ ಬಳಿ ಇದ್ದ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್ ಲೋಡ್‌ನಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇವುಗಳಲ್ಲಿ ಹಲವನ್ನು ನಾಶಪಡಿಸಲಾಗಿದೆ. ಜೈಲಿನಲ್ಲಿರುವ ಕೆಲವು ಅಧಿಕಾರಿಗಳ ಸಹಕಾರದಿಂದಲೇ ಕೈದಿಗಳಿಗೆ ಬೇಕಾದ ವಸ್ತುಗಳು ಪೂರೈಕೆಯಾಗುತ್ತಿವೆ ಎಂಬ ಆರೋಪಗಳು ಈ ಹಿಂದೆಯೂ ಕೇಳಿಬಂದಿದ್ದವು. ದರ್ಶನ್ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜೈಲು ಪರಿಸ್ಥಿತಿ ಕುರಿತು ತರಾಟೆಗೆ ತೆಗೆದುಕೊಂಡಿದ್ದರೂ, ವಾಸ್ತವದಲ್ಲಿ ಯಾವುದೇ ಸುಧಾರಣೆ ಆಗಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗಗೊಂಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
