ಮಕ್ಕಳನ್ನು ಯಾವ ಕಾರಣಕ್ಕೂ ಅವಿದ್ಯಾವಂತರಾಗಿ ಉಳಿಯಲು ಬಿಡಬಾರದು, ಓದು ಸ್ವಾಭಿಮಾನ ಬೆಳೆಸುತ್ತದೆ: ಸಿದ್ದರಾಮಯ್ಯ, ಸಿಎಂ

Updated on: Feb 09, 2024 | 5:22 PM

ಅವಕಾಶಗಳು ಸಿಕ್ಕಾಗ ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು, ತನಗೆ ಅವಕಾಶ ಸಿಕ್ಕ ಕಾರಣ ಓದಿ ವಿದ್ಯಾವಂತನಾದೆ, ಆದರೆ ತನ್ನ ಸಹೋದರರು ಓದದ ಕಾರಣ ಉಳುಮೆ ಮಾಡುತ್ತಾರೆ ಎಂದು ಅವರು ಹೇಳಿದರು. ವೇದಿಕೆ ಮೇಲೆ ಆಸೀನರಾಗಿದ್ದ ಸ್ವಾಮೀಜಿಯವರು ಮಕ್ಕಳಿಗೆ ಶಿಕ್ಷಣ ಒದಗಿಸುತ್ತಿರುವುದನ್ನು ಶ್ಲಾಘಿಸಿದ ಸಿದ್ದರಾಮಯ್ಯ ವಿದ್ಯೆಯು ಸ್ವಾಭಿಮಾನದ ಬದುಕು ನಡೆಸಲು ನೆರವಾಗುತ್ತದೆ ಎಂದು ಹೇಳಿದರು.

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಬೃಹತ್ ಉಪ್ಪಾರ ಸಮಾವೇಶದಲ್ಲಿ (Uppar community convention) ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಯಾವುದೇ ಕಾರಣಕ್ಕೂ ತಮ್ಮ ಮಕ್ಕಳನ್ನು ಅವಿದ್ಯಾವಂತರಾಗಿ ಉಳಿಯಲು ಬಿಡಬೇಡಿ ಎಂದು ಪೋಷಕರಿಗೆ (parents) ಮನವಿ ಮಾಡಿದರು. ತಮ್ಮ ಬದುಕಿನ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ತಮಗೆ ಓದುವ, ಶಿಕ್ಷಣ ಸಂಪಾದಿಸುವ ಉತ್ಕಟ ಅಸೆಯಿತ್ತು, ತಮ್ಮಲ್ಲಿದ್ದ ಛಲದಿಂದಲೇ ಕಾನೂನು ಪದವಿ ಪಡೆಯುವುದು ಸಾಧ್ಯವಾಯಿತು ಮತ್ತು ಡಾ ಬಿ ಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ನೆರವಿನಿಂದ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತು ಎಂದು ಹೇಳಿದರು. ಅವಕಾಶಗಳು ಸಿಕ್ಕಾಗ ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು, ತನಗೆ ಅವಕಾಶ ಸಿಕ್ಕ ಕಾರಣ ಓದಿ ವಿದ್ಯಾವಂತನಾದೆ, ಆದರೆ ತನ್ನ ಸಹೋದರರು ಓದದ ಕಾರಣ ಉಳುಮೆ ಮಾಡುತ್ತಾರೆ ಎಂದು ಅವರು ಹೇಳಿದರು. ವೇದಿಕೆ ಮೇಲೆ ಆಸೀನರಾಗಿದ್ದ ಸ್ವಾಮೀಜಿಯವರು ಮಕ್ಕಳಿಗೆ ಶಿಕ್ಷಣ ಒದಗಿಸುತ್ತಿರುವುದನ್ನು ಶ್ಲಾಘಿಸಿದ ಸಿದ್ದರಾಮಯ್ಯ ವಿದ್ಯೆಯು ಸ್ವಾಭಿಮಾನದ ಬದುಕು ನಡೆಸಲು ನೆರವಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More