ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ: ಮೂವರು ಆಸ್ಪತ್ರೆಗೆ ದಾಖಲು

Updated on: Oct 26, 2026 | 2:36 PM

ಲಖನೌದ ನೌಬಸ್ತಾ ಪ್ರದೇಶದಲ್ಲಿ ಕಾರು ಪಾರ್ಕಿಂಗ್ ವಿಚಾರದಲ್ಲಿ ನಡೆದ ಸಣ್ಣ ಜಗಳ ದೊಡ್ಡ ಗುಂಡಿನ ಚಕಮಕಿಗೆ ತಿರುಗಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದತ್‌ಗಂಜ್ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಲಖನೌ, ಅ,26: ಉತ್ತರ ಪ್ರದೇಶದ ರಾಜಧಾನಿ ಲಖನೌದ ಸಾದತ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಬಸ್ತಾ ಪ್ರದೇಶದಲ್ಲಿ ಕಾರು ಪಾರ್ಕಿಂಗ್ ವಿಚಾರವಾಗಿ ನಡೆದ ಸಣ್ಣ ಗಲಾಟೆಯೊಂದು ಭಾರಿ ರಾದ್ಧಾಂತಕ್ಕೆ ತಿರುಗಿ, ಗುಂಡಿನ ಚಕಮಕಿಯಲ್ಲಿ ಕೊನೆಗೊಂಡಿದೆ. ಸಣ್ಣ ಮಾತಿನ ಚಕಮಕಿಯಿಂದ ಆರಂಭವಾದ ಜಗಳ ತಾರಕಕ್ಕೇರಿ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಮೂವರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದು, ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ತಿಳಿಯುತ್ತಿದ್ದಂತೆ ಸಾದತ್‌ಗಂಜ್ ಠಾಣೆ ಪೊಲೀಸರು ಮತ್ತು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರುಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಗುಂಡಿನ ದಾಳಿ ನಡೆಸಿ ಪರಾರಿಯಾದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More