Parliament Building Inauguration: ಸಂಸತ್ ಕಟ್ಟಡ ಉದ್ಘಾಟನೆಗೆ ಸಜ್ಜು, ಮೇ 28ರಂದು ವಿಶೇಷ ಕಾರ್ಯಕ್ರಮ

|

Updated on: May 26, 2023 | 6:25 PM

ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೂತನ ಕಟ್ಟಡದ ಉಸ್ತುವಾರಿ ವಹಿಸಿಕೊಂಡಿದ್ದು, ಕಡಿಮೆ ಅವಧಿಯಲ್ಲಿ ಪ್ರಧಾನಿ ಮೋದಿ ಸರ್ಕಾರದ ಅಭಿಲಾಷೆಯಂತೆಯೇ ಅಚ್ಚುಕಟ್ಟಾಗಿ ಹೊಸ ಕಟ್ಟಡ ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಐತಿಹಾಸಿಕ ಸೆಂಗೋಲ್ ಸ್ಥಾಪಿಸಲಾಗುತ್ತದೆ.

13 ಎಕರೆ ಪ್ರದೇಶದಲ್ಲಿ ಹೊಸದಾಗಿ ನಿರ್ಮಾಣಗೊಂಡ ಸಂಸತ್ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೇ 28ರ ಭಾನುವಾರ ನೂತನ ಸಂಸತ್ ಭವನ ಉದ್ಘಾಟಿಸುತ್ತಿದ್ದಾರೆ. ನೂತನ ಸಂಸತ್ ಭವನಕ್ಕೆ ₹970 ಕೋಟಿ ವೆಚ್ಚವಾಗಿದೆ. ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೂತನ ಕಟ್ಟಡದ ಉಸ್ತುವಾರಿ ವಹಿಸಿಕೊಂಡಿದ್ದು, ಕಡಿಮೆ ಅವಧಿಯಲ್ಲಿ ಪ್ರಧಾನಿ ಮೋದಿ ಸರ್ಕಾರದ ಅಭಿಲಾಷೆಯಂತೆಯೇ ಅಚ್ಚುಕಟ್ಟಾಗಿ ಹೊಸ ಕಟ್ಟಡ ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಐತಿಹಾಸಿಕ ಸೆಂಗೋಲ್ ಸ್ಥಾಪಿಸಲಾಗುತ್ತದೆ. ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಸಂಸತ್ತಿನ ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ, ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುತ್ತದೆ.