Video: ಮುಂಗಾರು ಅಧಿವೇಶನಕ್ಕೂ ಮುನ್ನ ಆಪರೇಷನ್ ಸಿಂಧೂರ್, ಭಯೋತ್ಪಾದನೆ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು?
ವಿಜಯೋತ್ಸವದ ಸಂಭ್ರಮಕ್ಕಾಗಿಯೇ ಈ ಮುಂಗಾರು ಅಧಿವೇಶನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿಯ ಬಳವನ್ನು ಕಂಡಿದೆ. ಆಪರೇಷನ್ ಸಿಂಧೂರ್ನಲ್ಲಿ ಭಾರತ ಸೇನೆಯು ನಿಗದಿ ಪಡಿಸಿದ್ದ ಗುರಿಯನ್ನು ಶೇ.100ರಷ್ಟು ಸಾಧಿಸಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಕೇವಲ 22 ನಿಮಿಷಗಳಲ್ಲಿ ನೆಲ ಸಮ ಮಾಡಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ. ಈ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ್ದಾರೆ.
ನವದೆಹಲಿ, ಜುಲೈ 21: ವಿಜಯೋತ್ಸವದ ಸಂಭ್ರಮಕ್ಕಾಗಿಯೇ ಈ ಮುಂಗಾರು ಅಧಿವೇಶನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿಯ ಬಳವನ್ನು ಕಂಡಿದೆ. ಆಪರೇಷನ್ ಸಿಂಧೂರ್ನಲ್ಲಿ ಭಾರತ ಸೇನೆಯು ನಿಗದಿ ಪಡಿಸಿದ್ದ ಗುರಿಯನ್ನು ಶೇ.100ರಷ್ಟು ಸಾಧಿಸಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಕೇವಲ 22 ನಿಮಿಷಗಳಲ್ಲಿ ನೆಲ ಸಮ ಮಾಡಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ. ಈ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ್ದಾರೆ.
ಮುಂಗಾರು ಮತ್ತು ಕೃಷಿಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ ನೀರಿನ ಸಂಗ್ರಹ ಸುಮಾರು ಮೂರು ಪಟ್ಟು ಹೆಚ್ಚಾಗಿದೆ, ಇದು ಇಡೀ ದೇಶಕ್ಕೆ. ವಿಶೇಷವಾಗಿ ರೈತರು, ಹಳ್ಳಿಗಳು ಮತ್ತು ಸಾಮಾನ್ಯ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

