Parliament Security Breach: ಸಂಸತ್ತಿನ ಭದ್ರತೆಯನ್ನು ಮತ್ತಷ್ಟು ಬಲಪಡಿಸಲಾಗುವುದು: ಪ್ರಹ್ಲಾದ್ ಜೋಶಿ
ಸಂಸತ್ತಿನಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತನಾಡಿದ್ದಾರೆ. ನಿನ್ನೆ ನಡೆದ ಅಹಿತಕರ ಘಟನೆಯು ಗೌರವಾನ್ವಿತ ಸಂಸತ್ತಿನ ಸದಸ್ಯರ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದ ಗಂಭೀರ ಘಟನೆ ಎಂದು ನಾವೆಲ್ಲರೂ ಒಪ್ಪುತ್ತೇವೆ. ಲೋಕಸಭಾ ಸ್ಪೀಕರ್ ಅವರು ಎಲ್ಲರೊಂದಿಗೆ ಸಭೆ ನಡೆಸಿದರು. ಸಂಸತ್ತಿನ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಹೆಚ್ಚಿನ ಆದ್ಯತೆ ನೀಡುವಂತೆ ಹೇಳಿದ್ದಾರೆ.
ದೆಹಲಿ, ಡಿ.14: ಸಂಸತ್ನಲ್ಲಿ ಭದ್ರತಾ ಲೋಪದ (Parliament Security Breach) ಬಗ್ಗೆ ಇಂದು ಸಂಸತ್ತಿನಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತನಾಡಿದ್ದಾರೆ. ನಿನ್ನೆ ನಡೆದ ಅಹಿತಕರ ಘಟನೆಯು ಗೌರವಾನ್ವಿತ ಸಂಸತ್ತಿನ ಸದಸ್ಯರ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದ ಗಂಭೀರ ಘಟನೆ ಎಂದು ನಾವೆಲ್ಲರೂ ಒಪ್ಪುತ್ತೇವೆ. ಲೋಕಸಭಾ ಸ್ಪೀಕರ್ ಅವರು ಎಲ್ಲರೊಂದಿಗೆ ಸಭೆ ನಡೆಸಿದರು. ಸಂಸತ್ತಿನ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಹೆಚ್ಚಿನ ಆದ್ಯತೆ ನೀಡುವಂತೆ ಹೇಳಿದ್ದಾರೆ. ಸ್ಪೀಕರ್ ನೀಡಿದ ಕೆಲವು ಸಲಹೆಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ, ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ. ಆದರೆ ಪ್ರತಿಪಕ್ಷಗಳ ಈ ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಮತ್ತು ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸದನದ ಬಾವಿಗೆ ಇಳಿದು ಪ್ರತಿಭಟನೆ ಮಾಡಿದ್ದಾರೆ. ಇದೀಗ ಸದನವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ