ದೇಶದ ರಾಜಕಾರಣದಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಿರುವುದಕ್ಕೆ ರಾಜೀವ್ ಗಾಂಧಿ ಕಾರಣ: ಸಿದ್ದರಾಮಯ್ಯ
ಬಿಜೆಪಿ ನಾಯಕರು ತಾವು ದಲಿತರು, ಹಿಂದುಳಿದವರು, ಶೋಷಿತರು ಮತ್ತು ಅಲ್ಪಸಂಖ್ಯಾತರ ಪರ ಅಂತ ಕೇವಲ ಬಾಯಿ ಮಾತಲ್ಲಿ ಹೇಳುತ್ತಾರೆಯೇ ಹೊರತು ಕೃತಿಯಲ್ಲಿ ಯಾವತ್ತೂ ತೋರಿಸಲ್ಲ, ಸಾಮಾಜಿಕ ನ್ಯಾಯ ಮತ್ತು ಎಲ್ಲ ವರ್ಗಗಳ ಜನರಿಗೆ ಸಮಾನ ಅವಕಾಶ ಸಿಗಬೇಕೆಂಬ ತತ್ವವನ್ನು ಅವರು ಎಂದೂ ಪಾಲಿಸಲಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ದಿವಂಗತ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಅವರೊಂದಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರದ್ದೂ ಇಂದು ಜನ್ಮ ವಾರ್ಷಿಕೋತ್ಸವ. ಕೆಪಿಸಿಸಿ ಕಚೇರಿಯಲ್ಲಿ ಇಬ್ಬರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀವ್ ಗಾಂಧಿಯವರ ಬಗ್ಗೆ ಮಾತಾಡುತ್ತ ಅತ್ಯಂತ ಕಿರಿಯ ವಯಸ್ಸಿನಲ್ಲಿ ದೇಶದ ಪ್ರಧಾನ ಮಂತ್ರಿಯಾದ ಅವರಿಗೆ ಯುವಶಕ್ತಿಯ ಮೇಲೆ ಅಪಾರ ಭರವಸೆಯಿತ್ತು ಮತ್ತು ಪ್ರಧಾನಿಯಾಗಿದ್ದ ಅವಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚು ಮಹತ್ವ ನೀಡಿದ್ದರು ಎಂದರು. ಸಾಮಾಜಿಕ ನ್ಯಾಯದ ಬಗ್ಗೆಯೂ ಬಹಳ ಕಾಳಜಿ ಇಟ್ಟುಕೊಂಡಿದ್ದ ಅವರು ದೇಶದಲ್ಲಿರುವ ಎಲ್ಲರಿಗೆ ಸರ್ವ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಸಿಗಬೇಕು ಎಂದು ಪ್ರತಿಪಾದಿಸುತ್ತಿದ್ದರು. ಇಂದು ದೇಶದ ರಾಜಕೀಯದಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಿರುವುದಕ್ಕೆ ರಾಜೀವ್ ಗಾಂಧಿಯವರು ಕಾರಣ ಎಂದು ಹೇಳಿದ ಮುಖ್ಯಮಂತ್ರಿ ಸಂವಿಧಾನದ 73 ಮತ್ತು 74 ನೇ ಕಲಮುಗಳಲ್ಲಿ ತಿದ್ದುಪಾಟು ತಂದು ಮಹಿಳೆಯರು ಸ್ಥಳೀಯ ಸಂಘಸಂಸ್ಥೆಗಳಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟರು ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ತಿರುಗೇಟು ನೀಡಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್